ಸಿಡಿಪಿಒ ಅಮಾನತಿಗೆ ಅಗ್ರಹಿಸಿ ಪ್ರತಿಭಟನೆ
ಶಹಾಪುರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿನ ಯೋಜನೆಗಳನ್ನು ಅಂಗನವಾಡಿಗಳಿಗೆ ತಲುಪಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಹಿನ್ನೆಲೆಯಲ್ಲಿ ಸಿಡಿಪಿಒ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಸಮಿತಿ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ಟೆಂಡರ್ಗಳಲ್ಲಿ ಪಾರದರ್ಶಕತೆ ಇಲ್ಲದೇ ಮೋಸ ಮಾಡಿದ್ದು, ಸ್ವಸಹಾಯ ಸಂಘಗಳ ಹಣವನ್ನು ಎತ್ತಿ ಹಾಕಲಾಗಿದೆ. ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಸೌಲಭ್ಯವಿರದೇ ಅವ್ಯವಸ್ಥೆಗೆ ನೂಕಿದ್ದಾರೆ. ಇವೆಲ್ಲವು ತನಿಖೆಯಾಗಬೇಕು ಎಂದು ಆಗ್ರಹಿಸಿದರು. ಸಿಡಿಪಿಒ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಅವರ ವರ್ತನೆ ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಬೇಜಾರು ತಂದಿದ್ದು. ಶೀಘ್ರವೇ ಅವರ ವಿರುದ್ಧ ಮೇಲಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಇನ್ನಷ್ಟು ಉಗ್ರ ಪಡಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಶಿವಪುತ್ರ ಜವಳಿ, ಶರಣಪ್ಪ ದಖನಿ, ನಿಂಗಣ್ಣ ಮಳ್ಳಳ್ಳಿ, ಚಂದಪ್ಪ ಮುನಿಯಪ್ಪ, ಮರೆಪ್ಪ ಕ್ರಾಂತಿ, ಶಿವಕುಮಾರ ತಳವಾರ, ಬಾಬಾಸಾಹೇಬ ವಡೆಯರು, ದೇವಿಂದ್ರಪ್ಪ ವಡಿಗೇರ, ಮಾಳಿಂಗರಾಯ ಅನಕಸುಗೂರು, ಬಸವರಾಜ ನಾಟೇಕಾರ, ವಿರುಪಾಕ್ಷಿ ಬಡಿಗೇರ ಇತರರು ಇದ್ದರು. ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಖರ್ಗೆಗೆ ರೇಲ್ವೆ ಖಾತೆ: ತುನ್ನೂರ ಸ್ವಾಗತ
ಯಾದಗಿರಿ: ಕೇಂದ್ರ ಕಾರ್ಮಿಕ ಖಾತೆ ಸಚಿವರಾಗಿದ್ದ ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಮುಖವಾದ ರೇಲ್ವೆ ಖಾತೆ ಜವಾಬ್ದಾರಿ ನೀಡಿರುವುದು ಸ್ವಾಗತಾರ್ಹ ಎಂದು ಮಾಜಿ ಎಂಎಲ್ಸಿ ಚೆನ್ನಾರೆಡ್ಡಿ ಪಾಟೀಲ ತುನ್ನೂರ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ನಲ್ಲಿ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಖರ್ಗೆ ಒಬ್ಬರಾಗಿದ್ದಾರೆ. ಯಾವ ಖಾತೆಯನ್ನು ಕೊಟ್ಟರೂ ಸಮರ್ಥವಾಗಿ ಹಾಗೂ ದಕ್ಷ ರೀತಿಯಲ್ಲಿ ನಿಭಾಯಿಸುವ ಶಕ್ತಿ ಖರ್ಗೆ ಅವರಲ್ಲಿದೆ. ಅವರಿಗೆ ರೇಲ್ವೆ ಖಾತೆ ಸಿಕ್ಕಿರುವುದರಿಂದ ಹಿಂದುಳಿದ ಹೈದರಾಬಾದ್ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ರೇಲ್ವೆ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಸಿಗಲಿದೆ. ನೆನಗುದಿಗೆ ಬಿದ್ದಿರುವ ರಾಜ್ಯದ ರೇಲ್ವೆ ಯೋಜನೆಗಳಿಗೆ ಚಾಲನೆ ದೊರೆವ ಆಶಾಭಾವನೆಯಿದೆ. ಖರ್ಗೆಯವರ ದಕ್ಷತೆ, ಪ್ರಾಮಾಣಿಕತೆ ಹಾಗೂ ಪಕ್ಷ ನಿಷ್ಠೆಯನ್ನು ಗುರ್ತಿಸಿ ಹೈಕಮಾಂಡ್ ಉತ್ತಮ ನಿರ್ಧಾರ ಕೈಗೊಂಡಿದೆ ಎಂದು ಚೆನ್ನಾರೆಡ್ಡಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

