25ರಂದು ಅರಣ್ಯ ಅಧಿಕಾರಿಗಳ ಸಭೆ: ಶಾಸಕ ಉಮೇಶ ಜಾಧವ
ಚಿಂಚೋಳಿ: ತಾಲೂಕಿನ ಕುಂಚಾವರಂ ಮೀಸಲು ಅರಣ್ಯ ಪ್ರದೇಶದಲ್ಲಿ ಮತ್ತು ಸರ್ಕಾರಿ ಜಮೀನುಗಳಲ್ಲಿ ಅಕ್ರಮ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ನೀಡುತ್ತಿರುವ ಕಿರುಕುಳ ತಪ್ಪಿಸಲು ಅರಣ್ಯ ಮತ್ತು ಕಂದಾಯ ಇಲಾಖೆಗಳಿಂದ ಜಂಟಿ ಸರ್ವೆ ಮಾಡಲು ಅರಣ್ಯ ಸಚಿವ ರಮಾನಾಥ ರೈ ಮತ್ತು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಸೂಚಿಸಿದ್ದಾರೆ ಎಂದು ಶಾಸಕ ಡಾ. ಉಮೇಶ ಜಾಧವ ತಿಳಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆ ಪೂರ್ವದಲ್ಲಿ ರೈತರಿಗೆ ಅಕ್ರಮ ಜಮೀನು ಸಕ್ರಮಗೊಳಿಸುವ ಕುರಿತು ಭರವಸೆ ನೀಡಲಾಗಿತ್ತು. ಅದರಂತೆ ನಡೆದುಕೊಳ್ಳಲಾಗುತ್ತಿದೆ ಎಂದರು.
ಚಿಂಚೋಳಿ ತಾಲೂಕಿನ ಕುಂಚಾವರಂ ಅರಣ್ಯ ಪ್ರದೇಶದಲ್ಲಿ ಹಾಗೂ ಭೋಗಾಲಿಂಗದಳ್ಳಿ ಅರಣ್ಯ ಪ್ರದೇಶದಲ್ಲಿ ಅನೇಕ ವರ್ಷಗಳಿಂದ ಬಡ ರೈತರು ತಮ್ಮ ಕುಟುಂಬ ಉಪಜೀವನಕ್ಕಾಗಿ ಅಕ್ರಮ ಸಾಗುವಳಿ ನಡೆಸುತ್ತಿದ್ದಾರೆ ಎಂದರು. ಈಗ ಜಮೀನು ಸಕ್ರಮಗೊಳಿಸಲು ಕಾನೂನುಗಳು ಅಡ್ಡಿಯಾಗುತ್ತಿವೆ. ಇಂತಹ ಕಾನೂನು ತೊಡಕುಗಳನ್ನು ನಿವಾರಿಸಲು ಅರಣ್ಯ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆಯಾಗಿದೆ. ಕಂದಾಯ ಮತ್ತು ಅರಣ್ಯ ಹಾಗೂ ಸಮಾಜ ಕಲ್ಯಾಣ ಅಧಿಕಾರಿಗಳ ಸಭೆ ನಡೆಸಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಜೂನ್ 25ರಂದು ಬೆಂಗಳೂರಿನಲ್ಲಿ ಅರಣ್ಯ ಅಧಿಕಾರಿಗಳ ಸಭೆ ನಡೆಯಲಿದೆ ಎಂದರು.
ತಾಲೂಕಿನಲ್ಲಿ ಸಂಚರಿಸುವ ಬಸ್ಗಳು ತುಂಬಾ ಹಳೆಯದಾಗಿವೆ. ಇಲ್ಲಿನ ವ್ಯವಸ್ಥಾಪಕರ ಬಗ್ಗೆ ದೂರುಗಳು ಬಂದಿವೆ. ಅವರ ಮೇಲೆ ಶೀಘ್ರದಲ್ಲೇ ಕ್ರಮ ಕೈಕೊಳ್ಳಲಾಗುತ್ತಿದೆ ಎಂದು ಶಾಸಕ ಡಾ. ಉಮೇಶ ಜಾಧವ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

