ಗುಲ್ಬರ್ಗಾ

ದೇಶದ ಕಟ್ಟಕಡೆ ವ್ಯಕ್ತಿಗೆ ಸೌಲಭ್ಯ ಸಿಕ್ಕಿಲ್ಲ: ಸಾಗರ

Published On :

ಗುಲ್ಬರ್ಗ/ಶಹಾಬಾದ್: ದೇಶದಲ್ಲಿ ಸಂವಿಧಾನ ಜಾರಿಗೆಯಾಗಿ 64 ವರ್ಷ ಕಳೆದರೂ ದೇಶದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯ ಸಿಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ ವಿಷಾದ ವ್ಯಕ್ತಪಡಿಸಿದರು.
ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಡಾ. ಅಂಬೇಡ್ಕರ್ ಅವರ 122ನೇ ಜಯಂತ್ಯುತ್ಸವ ಸಮಿತಿ ವತಿಯಿಂದ ಏರ್ಪಡಿಸಿದ್ದ ಸ್ವಾಭಿಮಾನ ಸಂಕಲ್ಪ ದಿನಾಚರಣೆಯಲ್ಲಿ ಅತಿಥಿಗಳಾಗಿ ಮಾತನಾಡಿದರು. ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ ಮಾತನಾಡಿ, ಡಾ. ಅಂಬೇಡ್ಕರ್ ಅವರು ಬುದ್ಧನ ತತ್ವಗಳನ್ನು, ಬಸವಣ್ಣನವರ ವಿಚಾರಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ಸಂವಿಧಾನದ ಮೂಲಕ ಅವುಗಳನ್ನು ಜಾರಿಗೆ ಪ್ರಯತ್ನಿಸಿದರು ಎಂದರು.
ಉದ್ಯಮಿ ಸಂತೋಷಕುಮಾರ ಇಂಗಿನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ತೊನಸನಳ್ಳಿ ಗ್ರಾಪಂ ಅಧ್ಯಕ್ಷ ಗುರಮ್ಮ ಕರಣಿಕ ಕಾರ್ಯಕ್ರಮ ಉದ್ಘಾಟಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಎಂ.ಎ. ರಶೀದ್, ಉಪನ್ಯಾಸಕ ಸಂಜಯ ಮಾಕಲ್ ಮಾತನಾಡಿದರು. ನಿಂಗಣ್ಣ ಹುಳಗೋಳ, ಡಾ. ಪಿ.ಎಂ. ಸಜ್ಜನ್, ಸೋಮಶೇಖರ ಜಿಂಗಾಡೆ, ಮಹ್ಮದ್ ಖದೀರ್, ಸತೀಶ ಕಂಬಾನೂರ, ಬಸವರಾಜ ಮಯೂರ, ಲೋಹಿತ ಕಟ್ಟಿ ಇತರರು ಇದ್ದರು.
ನಗರಸಭೆ ನೂತನ ಸದಸ್ಯರಿಗೆ ಸನ್ಮಾನಿಸಲಾಯಿತು. ರಾಜೇಂದ್ರಕುಮಾರ ಜಂಬಗಿ ಸ್ವಾಗತಿಸಿದರು. ಕೃಷ್ಣಪ್ಪ ಕರಣಿಕ ಕಾರ್ಯಕ್ರಮ ನಿರೂಪಿಸಿದರು. ನರಸಿಂಹಲು ರಾಯಚೂರಕರ ವಂದಿಸಿದರು.
ಕಲಾಕಾರ ಸಾಗರ ತಂಡದಿಂದ ಸಾಂಸ್ಕೃತಿಕ ಹಾಗೂ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಗರದ ಪ್ರಮುಖ ಬೀದಿಗಳಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.