ಪ್ರಶಸ್ತಿ, ಪುರಸ್ಕಾರಗಳಿಂವ ವ್ಯಕ್ತಿಗೆ ಗೌರವ: ತೋಟೇಂದ್ರ ಶಿವಾಚಾರ್ಯರು
ಕನ್ನಡಪ್ರಭ ವಾರ್ತೆ ಸುರಪುರ ಜೂ.21
ಪ್ರಶಸ್ತಿ, ಪುರಸ್ಕಾರ, ಸನ್ಮಾನ ಮತ್ತು ಸತ್ಕಾರಗಳು ವ್ಯಕ್ತಿಯ ಸೇವೆ ಗುರುತಿಸಿ ಸಮಾಜ ನೀಡುವ ಗೌರವವಾಗಿದೆ. ಪ್ರಶಸ್ತಿ, ಪುರಸ್ಕಾರಗಳಿಂದ ವ್ಯಕ್ತಿಗೆ ಗೌರವದ ಜತೆಗೆ ಜವಾಬ್ದಾರಿ ಹೆಚ್ಚಿಸುತ್ತದೆ ಎಂದು ನಾಲವಾರ ಕೋರಿಸಿದ್ದೇಶ್ವರ ಮಠತ ಪೀಠಾಧಿಪತಿ ತೋಟೇಂದ್ರ ಶಿವಾಚಾರ್ಯರು ಹೇಳಿದರು.
ಕರಡಕಲ್ ಕೋರಿಸಿದ್ದೇಶ್ವರ 13ನೇ ಜಾತ್ರಾ ಮಹೋತ್ಸವ ನಿಮಿತ್ತ ಸಗರನಾಡು ಸೇವಾ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ, ಅಧ್ಯಾತ್ಮಿಕ ಕ್ಷೇತ್ರಗಳಲ್ಲಿ ಬಹುದಿನಗಳಿಂದ ದಣಿವರಿಯದೆ ದುಡಿಯುತ್ತಿರುವ ಹಿರಿಯ ಸಾಧಕರನ್ನು ಸನ್ಮಾನಿಸಿ ಗೌರವಿಸುತ್ತಿರುವುದು ಶ್ಲಾಘನೀಯ ಎಂದು ಗುಣಗಾನ ಮಾಡಿದರು.
ಹಿರಿಯ ಸಾಧಕರಾದ ಶಾಂತಪ್ಪ ಬೂದಿಹಾಳ, ಜಿ.ಎಸ್. ಬಸವರಾಜಶಾಸ್ತ್ರಿ, ಬಸಣ್ಣ ಗೊಡ್ರಿ ಕೊಡೇಕಲ್, ಮಲ್ಲಿಕಾರ್ಜುನ ಸತ್ಯಂಪೇಟೆ ಅವರಿಗೆ ಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಸಾಧಕರನ್ನು ಪರಿಚಯಿಸಿದರು.
ಕರಡಕಲ್ ಕೋರಿಸಿದ್ದೇಶ್ವರ ಶಾಖಾ ಮಠದ ಶಾಂತರುದ್ರಮುನಿ ಸ್ವಾಮೀಜಿ, ಮುದನೂರಿನ ಮಲ್ಲಿಕಾರ್ಜುನ ಸ್ವಾಮೀಜಿ, ಹರನಾಳ, ಯಡ್ರಾಮಿ, ಖೈರಾವಡಿಗಿ ಪೂಜ್ಯರು ಮತ್ತು ಪ್ರಮುಖರಾದ ರವಿ ಸೊನ್ನದ ಕೆಂಭಾವಿ, ಸೂಗರೇಶ ವಾರದ, ಶರಣಕುಮಾರ ಜಾಲಹಳ್ಳಿ, ಮಲ್ಲಯ್ಯ ಪರಸನಹಳ್ಳಿ, ಶಿವಪ್ರಕಾಶ, ಮಲ್ಲು ಚಾಂದಕೋಟೆ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

