ಲಿಂಗೇರಿ ಮೊರಾರ್ಜಿ ಶಾಲೆಗೆ ಜಿಪಂ ಉಪಾಧ್ಯಕ್ಷರ ಭೇಟಿ
ಯಾದಗಿರಿ: ತಾಲೂಕಿನ ಲಿಂಗೇರಿ ಸ್ಟೇಷನ್ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಪಂ ಉಪಾಧ್ಯಕ್ಷ ಶರಣಿಕಕುಮಾರ ದೋಖಾ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶಾಲೆಯ ಅಡುಗೆ ಕೋಣೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸಿದ್ಧ ಪಡಿಸಿಲಾಗುತ್ತಿದ್ದ ಆಹಾರವನ್ನು ಪರಿಶೀಲಿಸಿ, ಅಡುಗೆಯವರ ಮೇಲೆ ಕಿಡಿ ಕಾರಿದರು. ಮಕ್ಕಳಿಗಾಗಿ ತಯಾರಿಸುವ ಸಾಂಬಾರಿನಲ್ಲಿ ಉಪ್ಪಿದ್ದರೆ ಖಾರ ಇಲ್ಲ. ಪ್ರತಿದಿನ ಒಂದೇ ರೀತಿಯ ಊಟ ನೀಡಿದರೆ ಹೇಗೆ ಎಂದು ಪ್ರಶ್ನಿಸಿದರು.
ಗುಣಮಟ್ಟದ ಶಿಕ್ಷಣ: ವಸತಿ ಶಾಲೆಯಲ್ಲಿ ಮಕ್ಕಳಿಗೆ ವಿತರಿಸಲು ಸರ್ಕಾರದಿಂದ ಬಂದ ಪಠ್ಯ ಪುಸ್ತಕಗಳನು ತ್ವರಿತವಾಗಿ ನೀಡಿ, ಅಭ್ಯಾಸಕ್ಕೆ ಅನುವು ಮಾಡಿ ಕೊಡಬೇಕು. ಮಾತ್ರವಲ್ಲ ಈ ಭೇಟಿ ನಿರಂತವಾಗಿ ನಡೆಯುತ್ತದೆ. ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತಿದೆ. ಅದನ್ನು ಅಧಿಕಾರಿಗಳು ಮಕ್ಕಳಿಗೆ ತಲುಪಿಸುವ ಕೆಲಸ ಮಾಡಬೇಕು. ಹೀಗಾಗಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಶಿಕ್ಷಕರಿಗೆ ಮತ್ತು ವಸತಿ ನಿಲಯ ಮೇಲ್ವಿಚಾರಕರಿಗೆ ಸೂಚಿಸಿದರು.
ಸೌಕರ್ಯ: ಶಾಲೆಯ ಹೋರಾಂಗಣದಲ್ಲಿ ಸಾಕಷ್ಟು ಸ್ಥಳಾವಕಾಶವಿದೆ. ಶಾಲೆಯ ಹಿಂಭಾಗದಲ್ಲಿ ಬೆಳೆದ ಜಾಲಿಯನ್ನು ತೆಗೆದು ಕೈತೋಟ ಮಾಡಿ. ಅಲ್ಲಿ ಕೆಲ ತರಕಾರಿಗಳನ್ನು ಬೆಳದರೆ ಶಾಲಾ ಮಕ್ಕಳಿಗೆ ಅನುಕೂಲವಾಗುತ್ತದೆ. ಇದಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತರಕಾರಿ ಬೀಜ ನೀಡುವಂತೆ ಸೂಚಿಸುತ್ತೇನೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿನ ವಸತಿ ಶಾಲೆಗಳಲ್ಲಿ ಮೂಲಸೌಕರ್ಯವಿಲ್ಲ ಎಂದು ಪದೇಪದೆ ದೂರುಗಳು ಕೇಳಿ ಬರುತ್ತಿವೆ. ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಅಲ್ಲಿನ ಅವ್ಯವಸ್ಥೆ ಸರಿಪಡಿಸಬೇಕು. ಅವರ ಆಸೆಗೆ ತಣ್ಣೀರೆರಚಬೇಡಿ. ಇತ್ತೀಚೆಗೆ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಮಕ್ಕಳಿಗೆ ನೀಡಬೇಕಾದ ಪಠ್ಯ ಪುಸ್ತಕವನ್ನು ವಿತರಿಸದೆ ಹಾಗೆಯೇ ಇಟ್ಟುಕೊಂಡಿದ್ದಾರೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಸ್ಥಳದಲ್ಲಿದ್ದ ಜಿಲ್ಲಾ ಸಮಾಜ ಕಲ್ಯಾಧಿಕಾರಿ ರಾಮನಗೌಡ ಅವರಿಗೆ ಸೂಚಿಸಿದರು. ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮರಾಯ ಕಂದಕೂರ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

