ಸರ್ಕಾರಿ ನೌಕರರ ದಿನದ ವೇತನ ಸಂತ್ರಸ್ತರಿಗೆ ನೀಡಲು ಆಗ್ರಹ
ಗುಲ್ಬರ್ಗ: ಉತ್ತರಾಖಂಡದಲ್ಲಿ ನಡೆದಿರುವ ಜಲ ಪ್ರವಾಹ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರಿ ನೌಕರರ ಒಂದು ದಿನದ ವೇತನ ಸರ್ಕಾರ ನೀಡಬೇಕೆಂದು ಒತ್ತಾಯಿಸಿ ಜೈ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಜಲ ಪ್ರವಾಹದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು.
ಉತ್ತರಖಂಡದಲ್ಲಿ ಇತ್ತೀಚೆಗೆ ಜರುಗಿದ ಆಕಸ್ಮಿಕ ಜಲ ಪ್ರವಾಹದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಅಪಾರ ಆಸ್ತಿಪಾಸ್ತಿ ಮತ್ತು ಮನೆಗಳನ್ನು ಕಳೆದುಕೊಂಡಿದ್ದಾರೆ. ಅನೇಕ ಕುಟುಂಬಗಳು ಅನಾಥವಾಗಿವೆ. ಅನೇಕರು ಜಲಪ್ರವಾಹದಲ್ಲಿ ಸಿಕ್ಕಿಕೊಂಡಿದ್ದಾರೆ. ಉತ್ತರ ಖಂಡದ ಸರ್ಕಾರವು ಪರಿಸ್ಥಿತಿ ಹತೋಟಿಗೆ ತರಲು ಹರಸಾಹಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸರ್ಕಾರಿ ನೌಕರರ ಒಂದು ದಿನ ವೇತನ ಸಂತ್ರಸ್ತರಿಗೆ ನೀಡಬೇಕು ಎಂದು ಒತ್ತಾಯಿಸಿದರು.
ಮಂಜುನಾಥ ಹಾಗರಗಿ, ಸಚಿನ್ ಫರಹತಾಬಾದ್, ಜಗನ್ನಾಥ ಪಟ್ಟಣಶೆಟ್ಟಿ, ಕಾಶಿನಾಥ ಮಾಳಗೆ, ಬಾಬುರಾವ ಚಿಂಚನಸೂರ, ಬಿ. ಜಯಸಿಂಗ್, ಸತೀಶ್ ಫರಹತಾಬಾದ್, ಪಪ್ಪು ಬಿದ್ದಾಪುರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

