ಗುಲ್ಬರ್ಗಾ

ಆಳಂದ; ಟ್ಯಾಂಕರ್ ನೀರು ಪೂರೈಸಿದ್ರೂ ತೀರದ ದಾಹ

Published On :

ಕನ್ನಡಪ್ರಭ ವಾರ್ತೆ, ಆಳಂದ, ಜೂ.22
ತಾಲೂಕಿನಲ್ಲಿ ಕುಡಿಯುವ ನೀರು ಟ್ಯಾಂಕರ್ ಮೂಲಕ ಪೂರೈಸುತ್ತಿದ್ದರು ಅನೇಕ ಹಳ್ಳಿಗಳಲ್ಲಿ ನೀರಿನ ದಾಹ ಮುಗಿಯುತ್ತಿಲ್ಲ.
ತಾಲೂಕಿನ ಶೇ.40ರಷ್ಟು ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಆದರೂ ಕೆಲ ಹಳ್ಳಿಗಳಲ್ಲಿ ಟ್ಯಾಂಕರ್ ಇದೇ ಆದರೆ, ನೀರು ಸಿಗುತ್ತಿಲ್ಲ. ಟ್ಯಾಂಕರ್ ಮೂಲಕ ನೀರು ಬರುತ್ತದೆ ಎಂದು ಸಾರ್ವಜನಿಕರು ರಸ್ತೆ ಪಕ್ಕದಲ್ಲಿ ಕೊಡಗಳನ್ನು ಇಡುವುದು ಸಾಮಾನ್ಯವಾಗಿದೆ.
ಆದರೆ ಕೆಲ ಹಳ್ಳಿಗಳಲ್ಲಿ ಟ್ಯಾಂಕರ್‌ಗಳೇ ಬರುತ್ತಿಲ್ಲ ಎಂದು ದೂರುತ್ತಿದ್ದಾರೆ. ಗ್ರಾಪಂ, ತಾಪಂ, ಜಿಪಂ ಸದಸ್ಯರಾಗಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಗಮನ ಹರಿಸಬೇಕಾಗಿದೆ. ಕಳೆದ ಕೆಲ ದಿನಗಳ ಹಿಂದೆ ಶಾಸಕ ಬಿ.ಆರ್. ಪಾಟೀಲರು ಸಭೆ ನಡೆಸಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದ ಹಾಗೇ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅದಕ್ಕಾಗಿ ಅಧಿಕಾರಿಗಳು ಹರಿಸಹಸ ಪಟ್ಟರು ಕೂಡ ಕೆಳಗಿನ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ.
ಮಳೆಗಾಲ ಪ್ರಾರಂಭವಾದರೂ ತಾಲೂಕಿನಲ್ಲಿ ಮಳೆ ಬರದೇ ಬರಿ ಗಾಳಿ ಬೀಸುತ್ತಿದೆ. ಇದರಿಂದ ರೈತರು ಕೂಡ ಕಂಗಾಲಾಗಿದ್ದಾರೆ. ಕಳೆದ ಮಂಗಳವಾರ ಕೆಲವಡೆ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದಿದೆ. ಅಮರ್ಜಾ ಆಣೆಕಟ್ಟಿನ ನೀರು ಸಂಪೂರ್ಣ ಬತ್ತಿ ಹೋಗಿದೆ. ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೇಳ ತೀರದಷ್ಟು ಉಲ್ಬಣಗೊಂಡಿದೆ.
ಗ್ರಾಮೀಣ ಭಾಗದಲ್ಲಿ ಅಧಿಕಾರಿ ವರ್ಗದವರೂ ಸಮಸ್ಯೆಗಳಿರುವ ಹಳ್ಳಿಗಳಿಗೆ ಭೇಟಿ ನೀಡುತ್ತಿಲ್ಲ. ಇಂದು ನಾಳೆ ಮಳೆ ಸುರಿದು ಸಮಸ್ಯೆ ಬಗ್ಗೆ ಬಗೆಹರಿಯಲಿದೆ ಎಂಬ ಲೆಕ್ಕಾಚಾರದಲ್ಲಿ ಮುಂದೊಡುತ್ತಿದ್ದಾರೆ. ಜನರಿಗೆ ಸಮಸ್ಯೆ ಮಾತ್ರ ತಪ್ಪದಾಗಿದೆ. ಪಂಚಾಯತಿನಲ್ಲಿ ಪಿಡಿಓಗಳು ಇರುವುದಿಲ್ಲ. ನೀರಿನ ಸಮಸ್ಯೆ ಹೇಳುವುದೂ ಯಾರಿಗೆ ಎಂದು ಜನರು ನೊಂದು ತಮ್ಮ ಗೋಳು 'ಕನ್ನಡಪ್ರಭ'ಕ್ಕೆ ತೋಡಿಕೊಂಡಿದ್ದಾರೆ. ಶಾಸಕರು ಮತ್ತು ಜಿಪಂ ಸಿಇಒ ಪಲ್ಲವಿ ಆಕುರಾತಿ ಅವರು ತಾಲೂಕಿನ ಕೆಲ ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆಗೆ ಸ್ಪಂದಿಸುವರೇ ಎಂಬುದು ಕಾದುನೋಡಬೇಕಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.