ಗುಲ್ಬರ್ಗಾ

ಪುಸ್ತಕ, ಸಮವಸ್ತ್ರ ವಿತರಣೆ ವಿಳಂಬ; ಪ್ರತಿಭಟನೆ

Published On :

ಗುಲ್ಬರ್ಗ/ಶಹಾಬಾದ್: ನಗರದ ಶಾಲೆಗಳಿಗೆ ಸರ್ಕಾರ ಪುಸ್ತಕ, ಸಮವಸ್ತ್ರಗಳನ್ನು ವಿತರಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಎಐಡಿಎಸ್‌ಒ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ನೆಹರು ವೃತ್ತದಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂಘಟನೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸಿದರು. ಎಐಡಿಎಸ್‌ಒ ಜಿಲ್ಲಾ ಅಧ್ಯಕ್ಷ ಜಗನ್ನಾಥ ಎಸ್.ಎಚ್. ಮಾತನಾಡಿ, ಈ ಭಾಗದಲ್ಲಿ ಹತ್ತನೇ ತರಗತಿ ಫಲಿತಾಂಶ ಕಡಿಮೆಯಾಗುತ್ತಿದ್ದು, ಇಂಥ ಸಂದರ್ಭದಲ್ಲಿ ಸರ್ಕಾರ ವಿದ್ಯಾರ್ಥಿಗಳಿಗೆ ಸೂಕ್ತ ಪ್ರೋತ್ಸಾಹ ನೀಡುವ ಬದಲಾಗಿ ಇಂಗ್ಲಿಷ್, ಹಿಂದಿ ಪುಸ್ತಕಗಳನ್ನು ವಿತರಿಸುವಲ್ಲಿ ವಿಳಂಬ ಮಾಡುತ್ತಿರುವುದು ಖಂಡಿಸಿದರು.
ಕಾರ್ಯದರ್ಶಿ ಅಂಬಿಕಾ ಎಸ್.ಎಚ್. ಮಾತನಾಡಿದರು. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಬರೆದ ಮನವಿ ಪತ್ರವನ್ನು ಉಪ ತಹಸೀಲ್ದಾರರ ಮೂಲಕ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಅಧ್ಯಕ್ಷ ನಿಂಗಣ್ಣ ಜಂಬಗಿ, ಕಾರ್ಯದರ್ಶಿ ಸಿದ್ದು ಚೌಧರಿ, ಜಯಶ್ರೀ, ಅಶ್ವಿನಿ ಎಂ., ಸುಭದ್ರಾ, ಅಶೋಕ ಸುಂಕಪ್ಪ, ರಾಘವೇಂದ್ರ ಮಾನೆ ಸೇರಿದಂತೆ ವಿವಿಧ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.