'ಮಾದರಿ ತಾಲೂಕು ಮಾಡುವೆ'
ಕನ್ನಡಪ್ರಭ ವಾರ್ತೆ, ಜೇವರ್ಗಿ, ಜೂ.22
ಪ್ರತಿಯೊಂದುಹಳ್ಳಿಗಳಿಗೂ ರಸ್ತೆ, ಡಾಂಬರಿಕರಣ ಮಾಡಿ ಹಾಗೂ ಮೂಲ ಸೌಲಭ್ಯ ಒದಗಿಸಿ ಮಾದರಿ ತಾಲೂಕು ಮಾಡುವ ಸಂಕಲ್ಪ ತಮ್ಮದಾಗಿದ್ದು, ಅಧಿಕಾರಿಗಳು ರಸ್ತೆ ಸಂಪರ್ಕ ಹೊಂದದ ಹಳ್ಳಿಗಳ ವರದಿ ನೀಡುವಂತೆ ಶಾಸಕ ಡಾ. ಅಜಯಸಿಂಗ್ ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಲೋಕೋಪಯೋಗಿ ಇಲಾಖೆಯ ಅಧಿಕಾರಿ ವರ್ಗ ಹಾಗೂ ನೌಕರರ ಸಭೆ ನಡೆಸಿ ಮಾತನಾಡಿ, ಕಾಮಗಾರಿಗಳ ಗುಣಮಟ್ಟದಲ್ಲಿ ಗುತ್ತಿಗೆದಾರರೊಂದಿಗೆ ಯಾವುದೇ ಹೊಂದಾಣಿಕೆ ಬೇಡ. ಸರಿಯಾಗಿ ಕೆಲಸ ಮಾಡಿದ್ದೆಯಾದರೆ ತಮಗೂ ಕೀರ್ತಿ ಬರುತ್ತದೆ ಎಂದರು.
ಚಿಗರಹಳ್ಳಿ ವಾಯಾ ಯಡ್ರಾಮಿ ಯಂಕಂಚಿ ರಸ್ತೆ ಕಾಮಗಾರಿ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ವಿಳಂಬವಾಗುತ್ತಿದ್ದು, ತಮಗೆ ಪದೇ ಪದೇ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ. ಕಾಮಗಾರಿ ಕೊಟ್ಟ ಗುತ್ತಿಗೆದಾರರಿಗೆ ಎಚ್ಚರಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ತಾಪಂ ಇಒ ಪಲ್ಲಾನರಸಿಂಹರೆಡ್ಡಿ, ಲೋಕೋಪಯೋಗಿ ಇಲಾಖೆ ಎಇಇ ಶಿವಲಿಂಗಪ್ಪ ಇಬ್ರಾಹಿಂಪುರ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

