ಹರಿದಾಸ ವೈಭವಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ , ಗುಲ್ಬರ್ಗ , ಜೂ.23
ಧಾರಾಕಾರವಾಗಿ ಭಾನುವಾರ ಸಂಜೆ ಸುರಿದ ಮಳೆಯ ನಡುವೆಯೂ ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಹರಿದಾಸರ ಹಾಡುಗಳ ಸಂಗೀತ ಸಂಭ್ರಮ ಹರಿದಾಸ ವೈಭವಕ್ಕೆ ಚಾಲನೆ ನೀಡಲಾಯಿತು.
ಹರಿದಾಸ ಸಾಹಿತ್ಯ ವಿಚಾರ ವಾಹಿನಿ ವೇದಿಕೆ, ಸ್ವರಮಾಧುರಿ ಸಂಗೀತ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಹಿರಿಯ ಸಾಹಿತಿ ಡಾ. ಚನ್ನಣ್ಣ ವಾಲೀಕಾರ್ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದಲ್ಲಿ ಹರಿದಾಸ ಸಾಹಿತ್ಯ ವಿಚಾರ ವಾಹಿನಿ ವೇದಿಕೆಯ ಅಧ್ಯಕ್ಷ ಡಾ. ಸ್ವಾಮಿರಾವ ಕುಲಕರ್ಣಿ, ಸ್ವರಮಾಧುರಿ ಸಂಗೀತ ವಿದ್ಯಾಲಯದ ಅಧ್ಯಕ್ಷ ಮಹೇಶ ಬಡಿಗೇರ, ಗುಲ್ಬರ್ಗ ಆಕಾಶವಾಣಿ ಕೇಂದ್ರದ ಮುಖ್ಯಸ್ಥೆ ಅಂಜನಾ ಯಾತನೂರ, ಗುಲ್ಬರ್ಗ ವಿಶ್ವವಿದ್ಯಾಲಯದ ಡಾ. ಡಿ.ಬಿ. ನಾಯಕ, ಗಂಗಾವತಿಯ ಪವಕುಮಾರ ಜಿ. ಬೆಂಗಳೂರಿನ ಗಾಯಕಿ ಸಂಗೀತ ಕಾಖಂಡಕಿ ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಅವರ ಬರೆದಿರುವ ಮಂತ್ರಾಲಯ ಮಟ ಪ್ರಕಟಿಸಿರುವ ರಾಮದಾಸರ ಬದುಕು, ಸಾಹಿತ್ಯ ಕೃತಿಯನ್ನು ಬಿಡುಗಡೆಗೊಳಿಸಲಾಯಿತು ಮತ್ತು ಅಂಜನಾ ಯಾತನೂರ, ಸಂಗೀತಾ ಕಾಖಂಡಕಿ ಇತರರಿಗೆ ಸನ್ಮಾನಿಸಲಾಯಿತು. ಹಲವಾರು ಸಂಗೀತಗಾರರು, ಸಂಗೀತಾಸಕ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಸೋಮವಾರ ಸಂಜೆ 6ಕ್ಕೆ ನಡೆಯುವ ಸಮಾರಂಭದಲ್ಲಿ ಹರಿದಾಸ ಸಂಗೀತ ರತ್ನ ರಾಜ್ಯ ಮಟ್ಟದ ಗೌರವ ಪ್ರಶಸ್ತಿಯನ್ನು ಬಾಲಗಕೋಟೆಯ ಅನಂತ ಕುಲಕರ್ಣಿ ಅವರಿಗೆ ನೀಡಿ ಗೌರವಿಸಲಾಗುತ್ತಿದೆ. ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಾಧಕರಿಗೆ ಇದೇ ಸಂದರ್ಭದಲ್ಲಿ ಸನ್ಮಾನ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

