ಕಲಬುರ್ಗಿ ವೇಗ ವಾಹಿನಿ ಪತ್ರಿಕೆ ತೃತೀಯ ವಾರ್ಷಿಕೋತ್ಸವ ಸಮಾರಂಭ ನಾಳೆ
ಯಾದಗಿರಿ: 'ಕಲಬುರ್ಗಿ ವೇಗ ವಾಹಿನಿ' ಕನ್ನಡ ದಿನ ಪತ್ರಿಕೆಯ ತೃತೀಯ ವಾರ್ಷಿಕೋತ್ಸವ ಸಮಾರಂಭ ಜೂ. 26ರಂದು ಬೆ.11ಕ್ಕೆ ನಗರದ ಜಿಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಸಮಾರಂಭದ ಸಾನ್ನಿಧ್ಯವನ್ನು ಡಾನ್ ಬಾಸ್ಕೊ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಫಾ. ದೇವಾಸಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ್ ಚಿಂಚನಸೂರ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಎಫ್.ಆರ್ ಜಮಾದಾರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಎಸ್ಪಿ ವಂಶಿಕೃಷ್ಣ, ಶಾಸಕರಾದ ಡಾ. ಮಾಲಕರೆಡ್ಡಿ, ರಾಜಾ ವೆಂಕಟಪ್ಪ ನಾಯಕ, ಗುರುಪಾಟೀಲ್ ಶಿರವಾಳ, ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರಡ್ಡಿ ಪಾಟೀಲ್ ತುನ್ನೂರು, ಬಿಜೆಪಿ ಮುಖಂಡ ಚಂದ್ರಶೇಖಗೌಡ ಮಾಗನೂರ ಇತರರು ಪಾಲ್ಗೊಳ್ಳಲಿದ್ದಾರೆ. ಹಿರಿಯ ಪತ್ರಕರ್ತರಾದ ಅನಿಲ ದೇಶಪಾಂಡೆ, ಎಸ್.ಎಸ್. ಮಠ, ರವಿ ನರಬೋಳಿ ಅವರನ್ನು ಸನ್ಮಾನಿಸಲಾಗುವುದು. ಅಲ್ಲದೇ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಪತ್ರಿಕೆ ವ್ಯವಸ್ಥಾಪಕ ಸಂಪಾದಕ ಸುರೇಶಕುಮಾರ ಹಳ್ಳಿಖೇಡ ತಿಳಿಸಿದ್ದಾರೆ.
--
ಜು.3ರಿಂದ ಪಿಯು ಪೂರಕ ಪರೀಕ್ಷೆ
ಯಾದಗಿರಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಜು.3ರಿಂದ 12ರವರೆಗೆ ನಡೆಯಲಿದ್ದು, ಪರೀಕ್ಷಾ ಸುವ್ಯವಸಸ್ಥಿತವಾಗಿ ನಡೆಸಲು ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಜಮಾದಾರ ಆದೇಶ ಹೊರಡಿಸಿದ್ದಾರೆ. ಪರೀಕ್ಷೆ ನಡೆಯುವ ದಿನಗಳಂದು ಬೆ. 8.30ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

