ನೀರು ಸರಬರಾಜು; ಇಂದಿನಿಂದ ವ್ಯತ್ಯಯ
ಗುಲ್ಬರ್ಗ: ನಗರಕ್ಕೆ ನೀರು ಸರಬರಾಜು ಮಾಡುವ ಭೀಮಾ ನದಿಯ ಮೂಲ ಸ್ಥಾವರ ಸರಡಗಿ ಪಂಪ್ ಹೌಸಿಗೆ ವಿದ್ಯುತ್ ಸರಬರಾಜು ಮಾಡುವ ಎಚ್.ಟಿ. ಲೈನ್ ಮಾರ್ಗದಲ್ಲಿ ತೊಂದರೆಯುಂಟಾಗಿದೆ. ಇದರ ನಿವಾರಣೆಗೆ ಜೆಸ್ಕಾಂನವರು ತುರ್ತು ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಈ ಕಾರಣಕ್ಕಾಗಿ ಜೂ.26 ಮತ್ತು 27ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.
ಕೃಷಿ: ನೇರ ಫೋನ್ ಇನ್ ಕಾರ್ಯಕ್ರಮ
ಗುಲ್ಬರ್ಗ: ಗುಲ್ಬರ್ಗ ದೂರದರ್ಶನ ಕೇಂದ್ರವು ಜೂ. 26ರಂದು ಸಂಜೆ 5.30ರಿಂದ 6ರವರೆಗೆ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ರೈತ ಬಾಂಧವರಿಗಾಗಿ ನೇರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಯಚೂರು ಕೃಷಿ ಸಂಶೋಧನಾ ಕೇಂದ್ರದ ಯೋಜನಾ ನಿರ್ದೇಶಕ ಡಾ. ಎಂ.ಬಿ. ಪಾಟೀಲ್ ಅವರು ನಿಖರ ಕೃಷಿ ಕುರಿತು ಮಾತನಾಡಲಿದ್ದಾರೆ. ವಿಷಯ ತಜ್ಞ ಡಾ. ಪಂಡಿತ ರಾಠೋಡ ಅವರು ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ. ಕೆ.ಎಸ್. ಶ್ರೀನಿವಾಸ ಪ್ರಸ್ತುತ ಪಡಿಸಲಿದ್ದಾರೆ. 220491, 220492 ದೂರವಾಣಿಗಳಿಗೆ ಸಂಪರ್ಕಿಸಿ ರೈತರು ತಮ್ಮ ಪ್ರಶ್ನೆಗಳಿಗೆ ತಜ್ಞರಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಕೇಂದ್ರದ ಸಹಾಯಕ ನಿರ್ದೇಶಕ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
'ಮೋದಿ ಕೇ ಲಿಯೆ ದಿಲ್ಲಿ ದೂರ್ ಹೈ'
ಜೇವರ್ಗಿ: ಎನ್ಡಿಎ ಮೈತ್ರಿ ಕೂಟದಿಂದ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿದೆ. ಆದರೆ ಮೋದಿ ಕೇ ಲಿಯೆ ದಿಲ್ಲಿ ಬಹುತ್ ದೂರ್ ಹೈ ಎಂದು ಪಪಂ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಇಬ್ರಾಹಿಂ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಎನ್ಡಿಎ ಮೈತ್ರಿ ಕೂಟದಿಂದ ಅನೇಕ ಪ್ರಾದೇಶಿಕ ಪಕ್ಷಗಳು ಹೊರಬಂದಿದ್ದು, ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗುವ ಹಗಲು ಕನಸು ಕಾಣುತ್ತಿದ್ದಾರೆ ಎಂದರು. ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಜನತೆ ತಕ್ಕ ಉತ್ತರ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಧೂಳೀಪಟವಾಗುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.
ಜು. 22ರಂದು ಪಿಂಚಣಿ ಅದಾಲತ್
ಗುಲ್ಬರ್ಗ: ಉತ್ತರ ಕರ್ನಾಟಕ ವಲಯದ ಅಂಚೆ ಇಲಾಖೆ ಪಿಂಚಣಿದಾರರಿಗಾಗಿ ಪಿಂಚಣಿ ಅದಾಲತ್ನ್ನು ಉ.ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ, ಬಯಲು ರಂಗ ಮಂದಿರದ ಹತ್ತಿರ, ಅಕ್ಕನ ಬಳಗದ ಎದುರು, ಧಾರವಾಡದಲ್ಲಿ ಜು.22ರಂದು ಹಮ್ಮಿಕೊಳ್ಳಲಾಗಿದೆ. ನಿವೃತ್ತರಾದ ನೌಕರರ ಪಿಂಚಣಿ, ಇತರೆ ನಿವೃತ್ತಿ ಸೌಲಭ್ಯ, ಕುಟುಂಬ ಪಿಂಚಣಿದಾರರ ಅಹವಾಲುಗಳಿದ್ದಲ್ಲಿ ಆಲಿಸಲಾಗುವುದು. ಅಕೌಂಟ್ಸ್ ಆಫೀಸರ್, ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ, ಧಾರವಾಡ-01 ಇವರಿಗೆ ಜೂ.30ರೊಳಗೆ ಕಳಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

