ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ
ಗುಲ್ಬರ್ಗ: ಕರ್ನಾಟಕ ಸಾಹಿತ್ಯ ಅಕಾಡೆಮಿ 2012ನೇ ಸಾಲಿನ ಪುಸ್ತಕ ಬಹುಮಾನಕ್ಕೆ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. 2012ರ ಜ.1ರಿಂದ 2012ರ ಡಿ.31ರೊಳಗೆ ಪ್ರಥಮ ಅವೃತ್ತಿಯಾಗಿ ಪ್ರಕಟವಾಗಿರಬೇಕು. ತಾಂತ್ರಿಕ ಪುಟದಲ್ಲಿ ಪ್ರಥಮ ಮುದ್ರಣ 2012 ಎಂದು ಮುದ್ರಿತವಾಗಿರಬೇಕು.
ಕಾವ್ಯ(ವಚನಗಳು ಮತ್ತು ಹನಿಗವನಗಳು), ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ(ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ), ಪ್ರವಾಸ ಸಾಹಿತ್ಯ, ಜೀವನ ಚರಿತ್ರ, ಆತ್ಮಕಥೆ (ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನ), ಸಾಹಿತ್ಯ ವಿಮರ್ಶೆ(ಸಾಹಿತ್ಯ ಚರಿತ್ರೆ, ಸಾಹಿತ್ಯ ತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ) (ಪಿ.ಶ್ರೀನಿವಾಸರಾವ ದತ್ತಿನಿಧಿ ಬಹುಮಾನ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕಗಳು, ಸಂಶೋಧನೆ, ಅನುವಾದ-1, ಅನುವಾದ-2, ಸಂಕೀರ್ಣ, ಲೇಖಕರ ಮೊದಲ ಸ್ವತಂತ್ರ ಕೃತಿಗೆ ಬಹುಮಾನ ಮತ್ತು ಕನ್ನಡದಿಂದ ಇಂಗ್ಲೀಷಿಗೆ ಅನುವಾದ. ಒಂದೇ ಪ್ರಕಾರದಲ್ಲಿ ಎರಡು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಅದೇ ಪ್ರಕಾರದಲ್ಲಿ ಮತ್ತೆ ಪರಿಗಣಿಸುವುದಿಲ್ಲ.
ಮೇಲ್ಕಂಡ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ಒಂದೊಂದು ಸಾದಾ ಪ್ರತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು- 560002 ಇವರಿಗೆ ಜು. 15ರೊಳಗೆ ತಲುಪಿಸಬೇಕಾಗಿ ಕೋರಿದೆ.
ಕಳುಹಿಸಲ್ಪಡುವ ಕೃತಿಯು ಮೇಲೆ ತಿಳಿಸಿದ 18 ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎಂಬುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು. ವಿವರಕ್ಕೆ
ವೆಬ್ಸೈಟ್ ಢಿಢಿಢಿ. ್ಞಛ್ಠಟಿಛಡಿಛ್ಞಛಡಝ್ಝಡಿಛಛ್ಛಛಜಛಟಣ.್ಟ್ಠ್ಜದಿಂದ ಪಡೆಯಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

