ಸ್ಮಶಾನದಲ್ಲಿ ಘನತ್ಯಾಜ್ಯ ವಿಲೇವಾರಿ
ಸುರಪುರ: ಪುರಸಭೆ ಸಿಬ್ಬಂದಿ ಪಟ್ಟಣದ ಘನ ತ್ಯಾಜ್ಯವನ್ನು ರಂಗಂಪೇಟೆಯ ಮುಸ್ಲಿಂ ಸಮುದಾಯದ ಸ್ಮಶಾನ ಭೂಮಿಯಲ್ಲಿ ವಿಲೇವಾರಿ ಮಾಡಿ ಸ್ಮಶಾನ ಭೂಮಿಯನ್ನು ಹಾಳು ಮಾಡುತ್ತಿದ್ದಾರೆ ಎಂದು ಟಿಪ್ಪು ಸುಲ್ತಾನ್ ಸೇವಾ ಸಂಘ ಆರೋಪಿಸಿದೆ.
ಪುರಸಭೆಯಿಂದ ಘನತ್ಯಾಜ್ಯ ವಿಲೇವಾರಿ ಮತ್ತು ಸಂಗ್ರಹಕ್ಕಾಗಿ ಸಮೀಪದ ವೆಂಕಾಟಾಪುರ ಬಳಿ ಲಕ್ಷಾಂತರ ರು. ವೆಚ್ಚ ಮಾಡಿ ಜಮೀನು ಖರೀದಿಸಲಾಗಿದೆ. ಆದರೆ ಆ ಸ್ಥಳದಲ್ಲಿ ವಿಲೇವಾರಿ ಮಾಡದೆ ಸಿಬ್ಬಂದಿ ಉದ್ದೇಶ ಪೂರ್ವಕವಾಗಿ ಹಸನಾಪುರ ಈದ್ಗಾ ಹತ್ತಿರದಲ್ಲಿರುವ ನಮ್ಮ ಸಮುದಾಯದ ಸ್ಮಶಾನ ಭೂಮಿಯಲ್ಲಿ ಕಸ ಎಸೆದು ಹಾಳು ಮಾಡುತ್ತಿದ್ದಾರೆ.
ನಿರ್ಲಕ್ಷ್ಯ ಧೋರಣೆ: ಇದರಿಂದ ಶವ ಸಂಸ್ಕಾರಕ್ಕೆ ಅತೀವ ತೊಂದರೆಯಾಗುತ್ತಿದೆ. ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿಗೆ ಹಲವಾರು ಬಾರಿ ಗಮನಕ್ಕೆ ತರಲಾಗಿದೆ. ಆದರೆ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆಂದು ದೂರಿದರು.
ಸುರಪುರ ಝಡಂದಕೇರಾ ಹತ್ತಿರದಲ್ಲಿರುವ ಸ್ಮಶಾನ ಭೂಮಿಯಲ್ಲೂ ಘನ ತ್ಯಾಜ್ಯವನ್ನು ಎಸೆದು ಹೋಗುತ್ತಿದ್ದಾರೆ. ಅವಳಿ ಪಟ್ಟಣಗಳ ಮುಸ್ಲಿಂ ಸಮುದಾಯದ ಸ್ಮಶಾನ ಭೂಮಿಯಲ್ಲಿ ಯಾವುದೇ ತರಹದ ಕಸ ಹಾಕದಂತೆ ಸಿಬ್ಬಂದಿಗೆ ಸೂಚಿಸಲು ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮತ್ತು ಸ್ವಚ್ಛತೆ ಕಾಪಾಡಬೇಕಾಗಿದ್ದ ಪುರಸಭೆಯ ಅಧಿಕಾರಿ ಮತ್ತು ನೈರ್ಮಲ್ಯ ಅಧಿಕಾರಿ ಮನವಿಗೆ ಸ್ಪಂದಿಸದೆ ಅಸಡ್ಡೆಯಿಂದ ವರ್ತಿಸುತಿದ್ದಾರೆ. ಮುಸ್ಲಿಂ ಜನಾಂಗದ ಸ್ಮಶಾನವನ್ನು ಹಾಳು ಮಾಡಬೇಕೆಂಬ ದುರುದ್ದೇಶದಂತೆ ವರ್ತಿಸುತಿದ್ದಾರೆಂದು ಆಕ್ರೋಶ ವ್ಯಕ್ತ ಪಡಿಸಿದೆ.
ಪರಿಶೀಲಿಸಿ ಕ್ರಮ ಕೈಗೊಳ್ಳಿ: ರಂಗಂಪೇಟ ಮತ್ತು ಸುರಪುರದ ಸ್ಮಶಾನದಲ್ಲಿ ಹಾಕಿರುವ ಕಸವನ್ನು ಬೇರೆಡೆಗೆ ಸ್ಥಳಾಂತರಿಸಬೇಕು. ಈ ಬಗ್ಗೆ ತಾವು ಖುದ್ದಾಗಿ ಸ್ಥಳ ಪರಿಶೀಲಿಸಿ ಅಶಿಸ್ತಿನಿಂದ ವರ್ತಿಸುವ ಹಾಗೂ ಕರ್ತವ್ಯ ಲೋಪ ಎಸಗುತ್ತಿರುವ ಪುರಸಭೆ ಮುಖ್ಯಾಧಿಕಾರಿ ಹಾಗೂ ನೈರ್ಮಲ್ಯಾಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಂಘಟನೆಯ ಅಧ್ಯಕ್ಷ ಖಾಜಾ ಖಲೀಲ್ ಅಹ್ಮದ್ ಅರಕೇರಿ, ಮೊಹ್ಮದ್ ಹಾಫೋಜ ಮುಲ್ಲಾ, ಶೇಖ್ ವಜಾಹತ್ ಹುಸೇನ್, ಖಮುರುದ್ದೀನ್, ಶರಮುದ್ದೀನ್, ಇಸ್ತೇಯಾಖ ಹುಸೇನ್ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಒಂದು ವಾರದ ಒಳಗಾಗಿ ಕ್ರಮ ಜರುಗಿಸದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಸಂಘಟನೆ ಎಚ್ಚರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

