ಅಂಚೆ ನೌಕರರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಗುಲ್ಬರ್ಗ ಜೂ.28
ಪೋಸ್ಟ್ಮ್ಯಾನ್ ಕಮಿಟಿಯ ಶಿಫಾರಸ್ಸುಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ಅಂಚೆ ನೌಕರರ ಸಂಘ ಮತ್ತು ರಾಷ್ಟ್ರೀಯ ಅಂಚೆ ನೌಕರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಗತ್ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪೋಸ್ಟ್ಮ್ಯಾನ್ ನೌಕರರ ಕೆಲಸಕ್ಕೆ ನೇಮಕವಾದ ವರದಿಯೂ ಸರಿಯಿಲ್ಲ. ನೌಕರರ ಪ್ರತಿನಿಧಿಗೊಳಗೊಂಡಂತೆ ಮತ್ತು ಕೆಲಸದ ನೈಜ ಅಧ್ಯಯನ ಮಾಡಬೇಕು. ಸರಿಯಾಗಿ ಪ್ರತಿ ತಿಂಗಳು ಸಂಬಳ ಪಾವತಿಯಾಗಬೇಕು. ಹೆಚ್ಚು ತೂಕವುಳ್ಳ ಇಪಿಪಿ ಬಟವಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಜನದಟ್ಟಣೆ, ಜನನಿಬಿಡ ಎಂಬ ಅವೈಜ್ಞಾನಿಕ ಲೆಕ್ಕಾಚಾರ ನಿಲ್ಲಿಸಿ ಈ ಸಂಬಂಧ ತಿದ್ದುಪಡಿ ಮಾಡಬೇಕು. ಅತ್ಯವಶ್ಯಕ ಪೋಸ್ಟ್ಮ್ಯಾನ್ ನೌಕರರ ನೇಮಕಾತಿ ಮಾಡಿಕೊಳ್ಳಬೇಕು ಎಂದು ನೌಕರರು ಒತ್ತಾಯಿಸಿದರು.
ನೌಕರರಿಗೆ ನೀಡುತ್ತಿರುವ ಕಿರುಕುಳ ನಿಲ್ಲಿಸಿ, ಸೈಕಲ್ ಮೇಲೆ ಹೋಗುವ ನೌಕರರಿಗೆ ಭತ್ತೆ ನೀಡಬೇಕು. ನೌಕರರಿಗೆ ಗುರುತಿನ ಚೀಟಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿದ್ದರಾಮಪ್ಪ ಹೂಗಾರ, ಖಾಜಾ ಮೈನುದ್ದೀನ್, ಸಿದ್ರಾಮ ರಾಠೋಡ ಸೇರಿದಂತೆ ಹಲವಾರು ನೌಕರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

