ಗುಲ್ಬರ್ಗಾ

ಹುದ್ದೆ ಭರ್ತಿ, ವೇತನ ಬಿಡುಗಡೆಗೆ ಒತ್ತಾಯ

Published On :

ಕನ್ನಡಪ್ರಭ ವಾರ್ತೆ   ಚಿಂಚೋಳಿ   ಜೂ.28
ತಾಲೂಕಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿಗೊಳಿಸಬೇಕು ಮತ್ತು ಗೌರವಧನ ಆಧಾರದ ಮೇಲೆ ಕಾರ್ಯನಿರ್ವಹಿಸಿದ ಶಿಕ್ಷಕರ ವೇತನ ಬಿಡುಗಡೆಗಾಗಿ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಹಾಗೂ ಶಿಕ್ಷಕರು ಗುರುವಾರ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ತಾಲೂಕಿನಲ್ಲಿರುವ ಅನೇಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಬದಲಿಗೆ ಗೌರವಧನ ಆಧಾರದ ಮೇಲೆ ಶಿಕ್ಷಕರಾಗಿ ಒಳ್ಳೆಯ ಪಾಠ ಬೋಧನೆ ಮಾಡಿದ್ದಾರೆ. 6 ತಿಂಗಳಿಂದ ವೇತನ ನೀಡಿಲ್ಲ, ಬೀದರ್ ಜಿಲ್ಲೆಯಲ್ಲಿ ಗೌರವಧನ ಆಧಾರದ ಮೇಲೆ ಕೆಲಸ ಮಾಡಿದ ಶಿಕ್ಷಕರ ವೇತನ ನೀಡಲಾಗಿದೆ ನಮ್ಮ ಗುಲ್ಬರ್ಗ ಜಿಲ್ಲೆಯಲ್ಲಿ ಮಾತ್ರ ಇನ್ನು ವೇತನ ಬಿಡುಗಡೆಗೊಳಿಸಿಲ್ಲ. ತಕ್ಷಣ ಗೌರವ ಧನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದರು.
ಸಿದ್ದು ಹಲಚೇರಿ, ಮಂಜುನಾಥ ಚಿಮ್ಮನಚೋಡ, ವಿಜಯಕುಮಾರ, ಬಸವರಾಜ ಐನೋಳಿ ಮುಂತಾದವರು ಭಾಗವಹಿಸಿದ್ದರು. ಶಿಕ್ಷಣ ಸಂಯೋಜಕ ದೇವೇಂದ್ರಪ್ಪ ಹೋಳ್ಕರ್ ಮನವಿ ಪತ್ರ ಸ್ವೀಕರಿಸಿ ಗೌರವಧನ  ಬರುವ ದಿನಗಳಲ್ಲಿ ನೀಡಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.