ದೇಣಿಗೆ ರೂಪದಲ್ಲಿ ಹಣ ಸಂಗ್ರಹ ಬೇಡ'
ಯಾದಗಿರಿ; ಉತ್ತರಾಖಂಡದಲ್ಲಿ ಸಂಭವಿಸಿರುವ ಪ್ರವಾಹಕ್ಕೆ ಸಂಬಂಧಿಸಿದಂತೆ ಖಾಸಗಿ ವ್ಯಕ್ತಿಗಳು ದೇಣಿಗೆ ರೂಪದಲ್ಲಿ ಹಣ ಸಂಗ್ರಹ ಮಾಡದಂತೆ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಉತ್ತರಖಂಡದಲ್ಲಿ ಸಂಭವಿಸಿರುವ ಪ್ರವಾಹದಲ್ಲಿ ಸಂತ್ರಸ್ತರಾಗಿರುವವರಿಗೆ ದೇಣಿಗೆ ನೀಡಲು ಖಾಸಗಿ ವ್ಯಕ್ತಿಗಳು ದೇಣಿಗೆ ರೂಪದಲ್ಲಿ ಹಣ ಸಂಗ್ರಹ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ರೀತಿ ಯಾರು ದೇಣಿಗೆ ರೂಪದಲ್ಲಿ ಹಣ ಸಂಗ್ರಹ ಮಾಡದಂತೆ ಕ್ರಮವಹಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ. ಈ ಹಿನ್ನಲೆಯಲ್ಲಿ ಯಾವುದೇ ಖಾಸಗಿ ವ್ಯಕ್ತಿಗಳು ದೇಣಿಗೆ ರೂಪದಲ್ಲಿ ಹಣ ಸಂಗ್ರಹ ಮಾಡಬಾರದೆಂದು ಅವರು ಸೂಚಿಸಿದ್ದಾರೆ.
ಬಾಳಿಕೆ ವಸ್ತುಗಳಿಗೆ ಆದ್ಯತೆ: ಪ್ರವಾಹ ಸಂತ್ರಸ್ತರಿಗೆ ದಾನಿಗಳು ನೆರವಾಗಲು ದೇಣಿಗೆ ರೂಪದಲ್ಲಿ ವುಲ್ಲನ್ ಬಟ್ಟೆಗಳು, ಬೆಡ್ಶೀಟ್ಗಳು, ಪಾತ್ರೆಗಳು ಹಾಗೂ ಇನ್ನಿತರ ದೀರ್ಘಕಾಲ ಬಾಳಿಕೆ ಬರುವ ವಸ್ತುಗಳನ್ನು ಮಾತ್ರ ಕೊಡಬಹುದಾಗಿದೆ. ಇವುಗಳನ್ನು ಸಂಗ್ರಹಿಸಿ ಕಳುಹಿಸಿಕೊಡಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ. ಇಂತಹ ಸಂಗ್ರಹವಾಗುವ ವಸ್ತುಗಳನ್ನು ಸಂತ್ರಸ್ತರಿಗೆ ತಲುಪಿಸುವ ಜವಾಬ್ದಾರಿ ಅವರು ವಹಿಸಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ನೆರವಿನ ರೂಪದಲ್ಲಿ ಸಂಗ್ರಹವಾಗುವ ವಸ್ತುಗಳನ್ನು ಅವರಿಂದ ರೇಲ್ವೆ ಇಲಾಖೆಯ ಮೂಲಕ ಉಚಿತವಾಗಿ ಸಾಗಾಣಿಕೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ದಾನಿಗಳು ಇಂತಹ ವಸ್ತುಗಳನ್ನು ಪ್ರವಾಹ ಸಂತ್ರಸ್ತರಿಗಾಗಿ ನೀಡಬೇಕಾದ್ದಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿಸಬೇಕು. ಇಲ್ಲಿಂದ ಈ ವಸ್ತುಗಳನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ರವಾನಿಸಲಾಗುತ್ತದೆ.
ಇದು ದೇಣಿಗೆ ರೂಪದಲ್ಲಿ ಸಂಗ್ರಹವಾಗುವ ಹಣಕ್ಕೆ ಅನ್ವಯವಾಗುವುದಿಲ್ಲ. ಸಂಗ್ರಹವಾಗುವ ಹಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುತ್ತದೆ ಎಂದು ಕಂದಾಯ ಇಲಾಖೆ (ಪ್ರಕೃತಿ ನಿರ್ವಹಣೆ ಮತ್ತು ಸ್ಟ್ಯಾಂಪ್ಸ್) ಸರ್ಕಾರದ ಉಪಕಾರ್ಯದರ್ಶಿಗಳು ಸುತ್ತೋಲೆ ಮೂಲಕ ಸೂಚಿಸಿರುವುದಾಗಿ ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

