ಮನೆ ಹಂಚಿಕೆಯಲ್ಲಿ ಅವ್ಯವಹಾರ: ಆರೋಪ
ಯಾದಗಿರಿ: ತಾಲೂಕಿನ ಸೈದಾಪುರ ಗ್ರಾಪಂನಲ್ಲಿ 2012ನೇ ಸಾಲಿನ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರಿಗೆ ವಿಶೇಷ ಯೋಜನೆಡಿಯಲ್ಲಿ ಮನೆಗಳ ಹಂಚಿಕೆಯಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಪರ ಜಿಲ್ಲಾಧಿಕಾರಿ ಜಹಿರಾ ನಸೀಮ್ ಅವರಿಗೆ ಶನಿವಾರ ಮನವಿ ಸಲ್ಲಿಸಿತು.
ಸಮಿತಿ ಸಂಚಾಲಕ ಕ್ರಿಸ್ಟೋಫರ್ ಮಾತನಾಡಿ, ಗ್ರಾಮ ಸಭೆಯಲ್ಲಿ ಸೈದಾಪುರ ಮೂಲ ನಿವಾಸಿಗಳನ್ನು ಬಿಟ್ಟು ತಮ್ಮ ಮನಸ್ಸಿಗೆ ಬಂದಂತೆ ಫನಾಭವಿಗಳನ್ನು ಆಯ್ಕೆ ಮಾಡಲಾಗಿದೆ. ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಿವರಾಯ ಗ್ರಾಮ ಸಭೆಯನ್ನು ನಡೆಸಿ ಮಧ್ಯವರ್ತಿಗಳೊಂದಿಗೆ ಕೂಡಿಕೊಂಡು ಅರ್ಹ ಫಲಾನುಭವಿಗಳಿಗೆ ಮನೆ ನಿಡದೇ ಆರ್ಥಿಕವಾಗಿ ಉತ್ತಮವಾಗಿರುವವರನ್ನು ಆಯ್ಕೆ ಮಾಡಿದ್ದಾರೆ ಎಂದು ದೂರಿದರು.ಸೈದಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಬರದೇ ಇರುವ ಫಲಾನುಭವಿಗಳ ಹತ್ತಿರ ಪಿಡಿಒ ಹಣದ ಆಸೆಗಾಗಿ ಒಬ್ಬ ಫಲಾನುಭವಿಯಿಂದ ತಲಾ ರು. 5 ಸಾವಿರ ಮಧ್ಯವರ್ತಿಗಳಿಂದ ಪಡೆದು ಆಯ್ಕೆ ಮಾಡಿದ್ದಾರೆ. ಅಂತಹ ಫಲಾನುಭವಿಗಳ ಪಟ್ಟಿಯನ್ನು ತಕ್ಷಣ ರದ್ದುಪಡಿಸಬೇಕು.
ಈ ವಿಶೇಷ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳನ್ನು ರದ್ದು ಪಡಿಸಿ ಊರಿನ ಪ್ರಮುಖರ ಮುಂದೆ ಗ್ರಾಮ ಸಭೆ ನಡೆಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕೆಂದು ಒತ್ತಾಯಿಸಿದರು. ಇಲ್ಲದಿದ್ದರೆ ಸೈದಾಪುರ ಗ್ರಾಪಂ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

