ಗುಲ್ಬರ್ಗಾ

ವಿವಿಧ ಬೇಡಿಕೆಗಳ ಈಡೇರಿಕೆಗೆ ಧರಣಿ

Published On :

ಗುಲ್ಬರ್ಗ: ನೂತನ ರಾಜ್ಯ ಸರ್ಕಾರ ಜುಲೈ ಮೊದಲ ವಾರ ಹೊಸ ಬಜೆಟ್ ಅಧಿವೇಶನ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಯ ಪ್ರಮುಖ ಬೇಡಿಕೆಗಳನ್ನು ಜಾರಿಗೊಳಿಸಲು ಒತ್ತಾಯಿಸಿ ಜುಲೈ 1ರಂದು ಸಿಪಿಐ ಪಕ್ಷ ಜಿಲ್ಲಾ ಘಟಕವು ಗುಲ್ಬರ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಬಜೆಟ್ ಪೂರ್ವ ಜನಾಗ್ರಹ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲು ನಿರ್ಧರಿಸಿದೆ.
ತೊಗರಿಗೆ 6 ಸಾವಿರ ಬೆಂಬೆಲೆ ನೀಡಿ: ಪ್ರತಿ ಕ್ವಿಂಟಲ್ ತೊಗರಿಗೆ 6 ಸಾವಿರ ಬೆಂಬಲ ಬೆಲೆ ನೀಡಬೇಕು. ಸರ್ಕಾರ ನೇರವಾಗಿ ರೈತರಿಂದ ತೊಗರಿ ಖರೀದಿಸಬೇಕು. ನೀರು ಪೂರೈಕೆ ಕೇಂದ್ರಗಳಲ್ಲಿ ನೀರು ಶುದ್ಧೀಕರಣ ಯಂತ್ರ ಅಳವಡಿಸಿ ಶುದ್ಧ ನೀರನ್ನು ನೀಡುವ ಯೋಜನೆ    ಯನ್ನು ಕೆಲ ಗ್ರಾಮ, ಹುಬ್ಬಳ್ಳಿ ನಗರ ಪಾಲಿಕೆ, ಗದಗದ ಖಾಸಗಿ ಟ್ರಸ್ಟ್ಗಳು ಜಾರಿ ಮಾಡಿವೆ. ಇಂತಹ ಯೋಜನೆ ರಾಜ್ಯ ಸರ್ಕಾರ ಎಲ್ಲಡೆ ಜಾರಿಗೊಳಿಸಲು ಪ್ಲೋರೈಡ್ ನೀರಿನ ಬಳಕೆ ತಪ್ಪಿಸಬೇಕೆಂದು ಜಿಲ್ಲಾ ಕಾರ್ಯದರ್ಶಿ ಮೌಲಾಮುಲ್ಲಾ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಮತ್ತು ನಗರ ಪ್ರದೇಶಗಳ ಬಡವರಿಗೆ ವಸತಿ ನಿರ್ಮಾಣಕ್ಕಾಗಿ ನಿವೇಶನ ಹಂಚಲು ಸ್ಥಳೀಯ ಸಂಸ್ಥೆಗಳಿಗೂ ಅಗತ್ಯ ಭೂಮಿ ಮಂಜೂರು ಮಾಡಬೇಕೆಂದು ಆಗ್ರಹಿಸಿದರು. ಅಕ್ರಮ ಗಣಿಗಾರಿಕೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಉಂಟಾದ 16,085 ಕೋಟಿ ನಷ್ಟವನ್ನು ಲೋಕಾಯುಕ್ತ ಸಂತೋಷ ಹೆಗಡೆ ವರದಿಯಂತೆ ಸಂಬಂದಿಸಿದ ಗಣಿ ಕಂಪನಿ ಹಾಗೂ ಅಧಿಕಾರಿಗಳಿಂದ ವಸೂಲಿ ಮಾಡಲು ಕಟ್ಟಿನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಬರಗಾಲ ಪೀಡಿತ ಜಿಲ್ಲೆಗಳಿಗೆ ಶಾಶ್ವತ ನಿರೋದಗಿಸುವ ಯೋಜನೆಗಳನ್ನು ರೂಪಿಸಿ ಅರ್ಧಕ್ಕೆ ನಿಂತ ಯೋಜನೆಗಳನ್ನು ಪೂರ್ಣಗೊಳಿಸಲು ಅಗತ್ಯ ಹಣವನ್ನು ಪ್ರತಿವರ್ಷ ಆದ್ಯತೆ ಮೇರೆಗೆ ಮಂಜೂರು ಮಾಡುವುದು ಸೇರಿದಂತೆ ವಿವಿಧ ನಾಗರಿಕರ ಬೇಡಿಕೆಗಳು ಬರುವ ಬಜೆಟ್ನಲ್ಲಿ ಮಂಡಿಸಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.