ಬಾಲಕಾರ್ಮಿಕ ಪದ್ಧತಿ ಅಳಿಸಿ
ಶಹಾಪುರ: ಬಾಲಕಾರ್ಮಿಕ ಪದ್ದತಿ ಅಳಿಸಿ, ಮಕ್ಕಳನ್ನು ಶಾಲೆಗೆ ಕಳುಹಿಸಿ. 14 ವರ್ಷದ ಒಳಗಿನ ಮಕ್ಕಳು ಯಾರೂ ಕೂಲಿ ಕೆಲಸ ಮಾಡಬಾರದು. ಬಾಲಕಾರ್ಮಿಕರನ್ನು ಬಳಸಿಕೊಳ್ಳುವದು ಶಿಕ್ಷಾರ್ಹ ಅಪರಾಧವಾಗಿದ್ದರೂ, ಈ ಅನಿಷ್ಟ ಪದ್ಧತಿ ನಿರ್ಮೂಲನೆ ಆಗದಿರುವುದು ದುರಂತ ಎಂದು ತಾಲೂಕು ಸಿವಿಲ್ ನ್ಯಾಯಾಧೀಶ ವೈ.ಕೆ. ಬೇನಾಳ ವಿಷಾದ ವ್ಯಕ್ತಪಡಿಸಿದರು.
ಸಹಕರಿಸಿ: ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸಂಘ, ತಾಲೂಕು ಕಾನೂನು ಯೋಜನಾ ಸಮಿತಿ ಹಾಗೂ ವಕೀಲರ ಸಂಘದ ವತಿಯಿಂದ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹೊಟೇಲ್, ಕಾರ್ಖಾನೆ, ಕಟ್ಟಡ ಕಾಮಗಾರಿಯಲ್ಲಿ ಬಾಲಕಾರ್ಮಿಕರನ್ನು ಹೆಚ್ಚಾಗಿ ಬಳಸಿಕೊಳ್ಳಲಾಗುತ್ತಿದೆ. ಇಂತಹ ಅಕ್ರಮಗಳು ತಡೆಗಟ್ಟಲು ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಯೊಂದಿಗೆ ಸಹಕರಿಸಬೇಕು. ಕಾನೂನು ಎಲ್ಲರೂ ತಿಳಿದುಕೊಂಡು ಈ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಇಚ್ಛಾಶಕ್ತಿ: ತಾಲೂಕು ವಕೀಲರ ಸಂಘದ ಅಧ್ಯಕ್ಷ ಆರ್.ಎಂ. ಹೊನ್ನಾರೆಡ್ಡಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಚ್ಛಾಶಕ್ತಿ ಅವಶ್ಯಕತೆ ಇದ್ದು, ಪ್ರತಿಯೊಬ್ಬರೂ ಬದ್ಧತೆಯಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ಇದನ್ನು ನಿರ್ಮೂಲನೆ ಮಾಡಲು ಸಾಧ್ಯ. ಮಾನವೀಯತೆ ಮರೆತು ಮಕ್ಕಳ ಅಂಗವಿಕಲತೆಯನ್ನು ಬಂಡವಾಳ ಮಾಡಿಕೊಂಡು ಭಿಕ್ಷಾಟನೆಗೆ ಹಚ್ಚುವುದು ವಿಪರ್ಯಾಸದ ಸಂಗತಿ ಎಂದು ಹೇಳಿದರು. ಮಕ್ಕಳ ಹಕ್ಕುಗಳ ಕುರಿತು ಹಿರಿಯ ನ್ಯಾಯವಾದಿ ಎಸ್.ವಿ. ಕುಲಕರ್ಣಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಲ್. ಭಜಂತ್ರಿ ವಹಿಸಿದ್ದರು. ಕಾರ್ಮಿಕ ನಿರೀಕ್ಷಕ ರವೀಂದ್ರ, ರಘುವೀರ ಸಿಂಗ್ ಠಾಕೂರ್ ಪ್ರತಿಜ್ಞಾವಿಧಿ ಬೋಧಿಸಿದರು. ರಿಯಾಜ್ ಪಟೇಲ್ ಪ್ರಾರ್ಥಿಸಿದರು. ಸಹಾಯಕ ಸರ್ಕಾರಿ ಅಭಿಯೋಜಕ ಎಚ್.ಎಸ್. ಹಕೀಮ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ರಾಯಪ್ಪರಡ್ಡಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಬಾಯಿ ಪಾಟೀಲ್, ಪಿಐ ಸುನೀಲ ಮೂಲಿಮನಿ, ನರಸಿಂಗ್ ಆರ್. ಬಾಸುತ್ಕರ್, ಮುಖ್ಯೋಪಾಧ್ಯಾಯ ನಿಂಗಣ್ಣ ಸಿಂಪಿ, ಸಾಲೋಮನ್ ಅಲ್‌ಫ್ರೆಡ್, ಅರ್. ಚನ್ನಬಸ್ಸು, ಶಿವಶರಣ ಹೊತಪೇಟ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

