ಸಮರ್ಪಕ ಚರಂಡಿ ವ್ಯವಸ್ಥೆ ಕೈಗೊಳ್ಳಿ: ಗುರುಪಾಟೀಲ
ಕೆಂಭಾವಿ: ಪಟ್ಟಣದ ಹಳೇ ಬಸ್ ನಿಲ್ದಾಣ ಪ್ರದೇಶದಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಚರಂಡಿ ನೀರು ರಸ್ತೆಯ ಮೇಲೆ ಹರಿದು ಕೊಳಚೆಯಾಗಿರುವ ಪ್ರದೇಶಕ್ಕೆ ಶಾಸಕ ಗುರುಪಾಟೀಲ ಭೇಟಿ ನೀಡಿ ಪರಿಶೀಲಿಸಿದರು. ಮಳೆ ಬಂದರೆ ಆ ಪ್ರದೇಶದ ಮನೆಗಳಿಗೆ ನೀರು ನುಗ್ಗಿ ತೀವ್ರ ಸಮಸ್ಯೆಯಾಗುತ್ತಿದೆ. ಅಲ್ಲದೇ ರಸ್ತಮೆ ಮೇಲೂ ನೀರು ಹರಿದು ತೊಂದರೆಯಾಗುತ್ತಿದೆ. ಚರಂಡಿ ನಿರ್ಮಾಣ ಮಾಡಿ ನೀರು ಹರಿದುಹೋಗುವಂತೆ ಮಾಡಿ ಎಂದು ಬಡಾವಣೆಯ ಜನ ಶಾಸಕರಿಗೆ ಮನವಿ ಮಾಡಿದರು.
ನೀರಿನ ವ್ಯವಸ್ಥೆ: ಶಾಸಕ ಗುರುಪಾಟೀಲ ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆ ಇಇ ಅವರಿಗೆ ಸೂಚನೆ ನೀಡಿ, ಶೀಘ್ರದಲ್ಲಿ ಚರಂಡಿ ತೆರೆದು ನೀರು ನಿಲ್ಲದಂತೆ ವ್ಯವವ್ಥೆ ಕೈಗೊಳ್ಳುವಂತೆ ತಿಳಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿವ ನೀರು, ರಸ್ತೆ, ಚರಂಡಿ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕೆಂಭಾವಿಯಲ್ಲಿ ಈಗಾಗಲೇ ಆರು ಕೊಳವೆ ಭಾವಿಯನ್ನು ಕೊರೆಸಿದ್ದು, ಇನ್ನೂ ಬೇಡಿಕೆ ಬಂದರೆ ಅಂಥ ಸ್ಥಳಗಳಲ್ಲಿಯೂ ನೀರಿನ ವ್ಯವಸ್ಥೆ ಮಾಡಲಾಗುವುದು. ಮುದನೂರು ರಸ್ತೆಯಲ್ಲಿ ರು. 10 ಲಕ್ಷ ವೆಚ್ಚದಲ್ಲಿ ತೆರೆದ ಬಾವಿಯನ್ನು ತೆಗೆದು ಪೈಪ್ಲೈನ್ ಮೂಲಕ ಪಟ್ಟಣಕ್ಕೆ ನೀರು ಸರಬರಾಜು ಕಾಮಗಾರಿ ಪ್ರಗತಿಯಲ್ಲಿದ್ದು, ಪಟ್ಟಣಕ್ಕೆ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದೆಂದರು.
ಸ್ವಚ್ಛತೆಗೆ ಆದ್ಯತೆ: ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಪಂ ಅಧಿಕಾರಿಗಳು ಸ್ವಚ್ಛತೆಯ ಬಗ್ಗೆ ಗಮನಹರಿಸಬೇಕು. ಕುಡಿಯುವ ನೀರು ಹಾಗೂ ರಸ್ತೆ, ಚರಂಡಿಗಳ ಬಗ್ಗೆ ಆದ್ಯತೆ ನೀಡುವಂತೆ ಸೂಚಿಸಿಸಲಾಗಿದೆ. ಬಸವ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳು ಅರ್ಹರಿದ್ದರೆ ಮಾತ್ರ ಹಣ ನೀಡಬೇಕು. ಈ ಬಗ್ಗೆ ದೂರುಗಳು ಬಂದಲ್ಲಿ ಸ್ವತಃ ನಾನೇ ಪರಿಶೀಲಿಸುತೇನೆ. ಸರ್ಕಾರದ ಯೋಜನೆಗಳು ಶ್ರೀಸಾಮಾನ್ಯನಿಗೂ ಮುಟ್ಟುವಂತಾಗಬೇಕು ಎಂದು ಹೇಳಿದರು. ಸುರೇಶ ಸೊನ್ನದ, ಸುಭಾಸ ಮ್ಯಾಗೇರಿ, ವೆಂಕಟೇಶ ವನದುರ್ಗ, ಎಂಜಿನಿಯರ್ ಪ್ರಹ್ಲಾದ ಜೋಶಿ, ಮಾನಪ್ಪ, ಮಲ್ಲನಗೌಡ ಬಿರಾದಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

