ಗುಲ್ಬರ್ಗಾ

ಎಸ್‌ಐ ದಬ್ಬಾಳಿಕೆ: ಆಟೋ ಚಾಲಕರ ಆಕ್ರೋಶ

Published On :

ಯಾದಗಿರಿ: ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಕೈ ಮಾಡಿದ್ದರಿಂದ ಆಟೋ ಚಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರದಲ್ಲಿ ನಡೆದಿದೆ.
  ಇಲ್ಲಿಯ ಸುಭಾಷ ವೃತ್ತದಲ್ಲಿ ನಿಂತಿದ್ದ ಅಟೋ ರಿಕ್ಷಾ ಚಾಲಕರ ಮೇಲೆ ನಗರ ಠಾಣೆ ಪಿಎಸ್‌ಐ ಕೈ ಮಾಡಿದ್ದು, ಚಾಲಕರ ಆಕ್ರೋಶಕ್ಕೆ ಕಾರಣವಾಗಿ ಪ್ರತಿಭಟನೆ ನಡೆಸಲು ಮುಂದಾದರು. ಈ ಸಂದರ್ಭದಲ್ಲಿ ಅಲ್ಲಿಯೇ ಹೋಗುತ್ತಿದ್ದ ಸಿಪಿಐ ಶಂಕರಗೌಡ ಪಾಟೀಲರಿಗೆ ವಿಷಯ ತಿಳಿಸಿದರು. ನಂತರ ಸಿಪಿಐ ಕಚೇರಿಗೆ ಆಗಮಿಸಿದ ಅಟೋ ಚಾಲಕರು, ಸಬ್ ಇನ್ಸ್‌ಪೆಕ್ಟರ್ ವರ್ತನೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ನಮ್ಮಿಂದಲೂ ತಪ್ಪಾಗುತ್ತದೆ. ಆದರೆ ನಮ್ಮ ಮೇಲೆ ಕೈ ಮಾಡುವುದು ಸರಿಯಲ್ಲ. ಈ ಕುರಿತು ಅಧಿಕಾರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದರು. ಆಟೋ ಚಾಲಕರ ಜತೆ ಮಾತನಾಡಿದ ಸಿಐ ಶಂಕರಗೌಡ ಪಾಟೀಲ, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ರಿಕ್ಷಾ ಚಾಲಕರೂ ಸಂಚಾರ ನಿಯಮಗಳನ್ನು ಪಾಲಿಸಬೇಕು. ಸಂಚಾರ ನಿಯಂತ್ರಣಕ್ಕೆ ಪೊಲೀಸರಿಗೆ ಸಹಕಾರಿಸಲು ಸಲಹೆ ನೀಡಿದರು. ನಂತರ ಪ್ರತಿಭಟನೆ ಕೈಬಿಡಲು ನಿರ್ಧರಿಸಿದ ಆಟೋ ಚಾಲಕರು, ಪೊಲೀಸ್ ಇಲಾಖೆಗೆ  ಸಹಕಾರ ನೀಡಲಾಗುವುದು. ನಮ್ಮ ಜೊತೆ ಸೌಜನ್ಯದಿಂದ ವರ್ತಿಸಲು ಪೊಲೀಸರಿಗೆ ನಿರ್ದೇಶನ ನೀಡಿ ಎಂದು ಮನವಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.