ಗುಲ್ಬರ್ಗಾ

ಸಂಸ್ಥೆಗಳಿಂದ ಗುಣಮಟ್ಟದ ಶಿಕ್ಷಣ ಅಗತ್ಯ: ಮಾನೇಗಾರ

Published On :


ಯಾದಗಿರಿ: ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿ ಮಕ್ಕಳಲ್ಲಿ ಬೆಳೆಸಿದಾಗ ಮಾತ್ರ ಅವರು ಆದರ್ಶ ವ್ಯಕ್ತಿಯಾಗುತ್ತಾರೆ ಎಂದು ಕಾರ್ಮಿಕ ಕಲ್ಯಾಣ ನಿಧಿಯ ಕೇಂದ್ರ ಸಲಹಾ ಸಮಿತಿ ಸದಸ್ಯ ಶರಣಪ್ಪ ಮಾನೇಗಾರ ಹೇಳಿದರು.
  ತಾಲೂಕಿನ ಯರಗೋಳ ಗ್ರಾಮದಲ್ಲಿ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆಯ ಪ್ರಮೋದ ಸ್ಮಾರಕ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರಿಯಾಂಕಾ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
  ರಾಷ್ಟ್ರ ಮತ್ತು ಸಮಾಜದ ಭವಿಷ್ಯ ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಯ ಕೈಯಲ್ಲಿದೆ. ಸ್ಮಶಾನವನ್ನು ಸ್ವರ್ಗವನ್ನಾಗಿ ಮಾಡುವ ಸಾಮರ್ಥ್ಯ ಕೇವಲ ಶಿಕ್ಷಣ ಸಂಸ್ಥೆಯ ಕೈಯಲ್ಲಿದೆ. ಮಕ್ಕಳ ಉತ್ತಮ ಭವಿಷ್ಯ ರೂಪಿಸುವುದು ಶಿಕ್ಷಕರಲ್ಲಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಪ್ರಿಯಾಂಕಾ ಶಾಲೆ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿರುವುದು ಸಂತೋಷದ ವಿಷಯ. ತಮ್ಮ ತಂದೆಯ ಸ್ಮರಣಾರ್ಥವಾಗಿ ಶಾಲೆಗೆ ಎರಡು ಕಂಪ್ಯೂಟರ್ ನೀಡುವುದಾಗಿ ಭರವಸೆ ನೀಡಿದರು.
ಟೋಕರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು  ಕೌಶಲ್ಯವನ್ನು ಬೆಳೆಸಿಕೊಂಡಾಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯ. ಈ ನಿಟಿನಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರಿಗೆ ಮಾರ್ಗದರ್ಶನ ನೀಡುವುದು ಶಿಕ್ಷಣ ಸಂಸ್ಥೆಗಳ ಪಾತ್ರವಾಗಿದೆ ಎಂದರು.
ಸಿಆರ್‌ಪಿ ದೇವಿಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾಗಮ್ಮ, ಆಂಜನೇಯ, ರಾಮಲಿಂಗಪ್ಪ ಅಲ್ಲಿಪುರ, ಅಮರೇಶ ಸಾಯಿಬಣ್ಣ, ಸಿದ್ದಪ್ಪ ಸಿಂಗೆ, ಚಂದ್ರಕಲಾ, ಯಂಕರೆಡ್ಡಿ ಮಾನೆಗಾರ ಇದ್ದರು. ಬಡ ಮಕ್ಕಳಿಗೆ ಉಚಿತ ಕವಿತಾ ಬಟ್ಟೆಯನ್ನು ವಿತರಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.