ಗುಲ್ಬರ್ಗಾ

ಕಾಲುವೆ ನೀರು; ಸಿಎಂಗೆ ಒತ್ತಾಯಿಸುವೆ

Published On :

ಸುರಪುರ: ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ನಾರಾಯಣಪುರ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ಮಾ. 30ರವರೆಗೆ ನೀರು ಹರಿಸುವಂತೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಒತ್ತಾಯಿಸಲಾಗುವುದು ಎಂದು ಮಾಜಿ ಸಚಿವ ರಾಜುಗೌಡ ತಿಳಿಸಿದರು.
  ಸ್ಥಳೀಯ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ರೈತರು ಬೆಳೆದ ಅಲ್ಪಾವಧಿ ಬೆಳೆಗಳಿಗೆ ನೀರಿಲ್ಲದೆ ತೀರಾ ಸಂಕಷ್ಟ ಎದುರಿಸುತ್ತಿದ್ದಾರೆ. ಶೇಂಗಾ, ಹತ್ತಿ, ಸೂರ್ಯಕಾಂತಿ, ಮೆಣಸಿನಕಾಯಿಗಳನ್ನು ಲಕ್ಷಾಂತರ ರುಪಾಯಿ ವೆಚ್ಚ ಮಾಡಿ ಬೆಳೆದಿದ್ದು ಬೆಳೆಗಳು ಕೈಗೆ ಬರಲು ಇನ್ನೂ ನೀರಿನ ಅವಶ್ಯಕತೆಯಿದೆ. ಕಾಲುವೆಗೆ ಫೆ.20ರ ವರೆಗೆ ನೀರು ಹರಿಸಲಾಗುವುದು ಎಂದು ಸುತ್ತೋಲೆ ಹೊರಡಿಸಿದ್ದ ಕೆಬಿಜೆಎನ್ನೆಲ್ ಫೆ.15 ರಂದೇ ಏಕಾಏಕಿ ಕಾಲುವೆಗೆ ನೀರು ಹರಿಸುವುದನ್ನು ನಿಲ್ಲಿಸಿರುವ ಕ್ರಮ ಸರಿಯಲ್ಲ ಎಂದು ಶಾಸಕರು ಆರೋಪಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯ: ನವೆಂಬರ್‌ನಲ್ಲಿ ಆಲಮಟ್ಟಿ ನೀರಾವರಿ ಸಲಹಾ ಸಮಿತಿಯ ಸಭೆ ವಿಳಂಬವಾಗಿರುವುದೇ ನೀರಿನ ಸಮಸ್ಯೆ ಉಲ್ಬಣಕ್ಕೆ ಕಾರಣವಾಗಿದೆ. ಒಂದು ವೇಳೆ ಅಕ್ಟೋಬರ್‌ನಲ್ಲಿ ಸಭೆ ಜರುಗಿದ್ದರೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತಿತ್ತು. ವಾರಾಬಂದಿ ಮಾಡಿ ಮತ್ತು ಪೋಲಾಗುತ್ತಿರುವ ನೀರನ್ನು ಉಳಿಸಿ ಎಂದು ಹೇಳಿದರೂ ಕೆಬಿಜೆಎನ್ನೆಲ್ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕಿಡಿಕಾರಿದರು.
  ಈ ಸಂಬಂಧ ನಾನು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಿವನಗೌಡ ನಾಯಕ, ಲಿಂಗಸ್ಗೂರು ಶಾಸಕ ಮಾನಪ್ಪ ವಜ್ಜಲ್ ಬೆಂಗಳೂರಿಗೆ ತೆರಳುತ್ತಿದ್ದು, ಅಲ್ಲಿ ಸಿಎಂ ಮತ್ತು ನೀರಾವರಿ ಸಚಿವರನ್ನು ಭೇಟಿಯಾಗಿ ರೈತರ ಸಮಸ್ಯೆ ಬಗ್ಗೆ ಮನವರಿಕೆ ಮಾಡಲು ನಿರ್ಧರಿಸಿರುವುದಾಗಿ ರಾಜುಗೌಡ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.