ಗುಲ್ಬರ್ಗಾ

ಸಾಲ ಸೌಲಭ್ಯ ಹೊಂದಲು ಮನವಿ

Published On :

ಗುಲ್ಬರ್ಗ: ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮಿಣ ಅಭಿವೃದ್ಧಿ ಬ್ಯಾಂಕ್ ಗುಲ್ಬರ್ಗ ಶಾಖೆಯಲ್ಲಿ ನೂತನವಾಗಿ ಚಿನ್ನಾಭರಣಗಳ ಮೇಲೆ ಸಾಲ ನೀಡುವ ಸೌಲಭ್ಯ ಪ್ರಾರಂಭವಾಗಿದೆ. ಸಾರ್ವಜನಿಕರು ಅದರ ಪ್ರಯೋಜನ ಪಡೆದುಕೂಳ್ಳುವಂತೆ ಕಸ್ಕಾರ್ಡ್ ಬ್ಯಾಂಕ್ ಜಿಲ್ಲಾ ನಿರ್ದೇಶಕ ರಾಮನಗೌಡ ಸಿ ಸುಬೇದಾರ ಜನತೆಗೆ ಕರೆ ನೀಡಿದರು.
ಗುಲ್ಬರ್ಗ ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿರುವ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮಿಣ ಅಭಿವೃದ್ಧಿ ಬ್ಯಾಂಕ್ ಶಾಖಾ ಕಚೇರಿಯಲ್ಲಿ ಸಾರ್ವಜನಿಕವಾಗಿ ಚಿನ್ನಾಭರಣದ ಅಡವಿಟ್ಟು ಸಾಲ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಗುಲ್ಬರ್ಗ ಹಾಗೂ ಯಾದಗಿರಿ ಜಿಲ್ಲೆಯಲ್ಲಿರುವ ಹತ್ತು ತಾಲೂಕಿನ ಜನತೆ ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದ ಅವರು ಇದುವರೆಗೆ ಪ್ರಾಥಮಿಕ ಬ್ಯಾಂಕುಗಳಿಗೆ ಸಾಲ ನೀಡುವುದಕ್ಕೆ ಸೀಮಿತವಾಗಿದ್ದ ಶಾಖೆ ಇನ್ನು ಮುಂದೆ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಅದರಿಂದ ಜಿಲ್ಲೆಯಲ್ಲಿ ಜನತೆಗೆ ಚಿನ್ನಾಭರಣ ಸಾಲ ನೀಡಲು ಪ್ರಾರಂಭಿಸಿರುವುದಾಗಿ ಅವರು ತಿಳಿಸಿದರು. ಜಿಲ್ಲಾ ವ್ಯವಸ್ಧಾಪಕ ಪ್ರಮೋದ ಕುಲ್ಕರ್ಣಿ ಮಾತನಾಡಿ, ಬ್ಯಾಂಕಿನ ಅಭಿವೃದ್ಧಿಗೆ ಎಲ್ಲಾ ತಾಲೂಕು ಕೇಂದ್ರದಲ್ಲಿರುವ ಪಿಕಾರ್ಚ್ ಬ್ಯಾಂಕುಗಳಲ್ಲಿ ಹಣ ಠೇವಣ ಸಂಗ್ರಹಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಬ್ಯಾಂಕಿನ ಅಭಿವೃದ್ಧಿ ದೃಷ್ಟಿಯಿಂದ ಮುಂಬರುವ ದಿನಗಳಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.
ಈ ಸಮಯದಲ್ಲಿ ಜಿಲ್ಲೆಯ ಎಲ್ಲಾ ಪಿಕಾರ್ಡ್ ಬ್ಯಾಂಕ್ ಸಿಬ್ಬಂದಿ ಮತ್ತು ವ್ಯವಸ್ಥಾಪಕರು ಹಾಜರಿದ್ದರು. ನೂತನ ಯೋಜನೆಗೆ ಸಹಕರಿಸಿದ ಸಿಬ್ಬಂದಿಗೆ ರಾಮನಗೌಡ ಶುಭಾಶಯ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.