ಗುಲ್ಬರ್ಗಾ

ಜೆಡಿಎಸ್‌ನಿಂದ ಪಾಟೀಲ್ ಬಿರುಸಿನ ಪ್ರಚಾರ

Published On :

ಯಾದಗಿರಿ: ನಗರಸಭೆ ವಾರ್ಡುಗಳಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿಗಳ ಪರ ಜೆಡಿಎಸ್ ಮುಖಂಡ ಶ್ರೀನಿವಾಸರಡ್ಡಿ ಪಾಟೀಲ್ ಚನ್ನೂರ ಭಾನುವಾರ ಬಿರುಸಿನ ಪ್ರಚಾರ ಕೈಗೊಂಡು ಮತಯಾಚಿಸಿದರು.
ಗಂಗಾನಗರದ ವಾರ್ಡ್ 2ಕ್ಕೆ ಸ್ಪರ್ಧಿಸಿರುವ ಬಸಲಿಂಗಪ್ಪ ಹಾಗೂ ವಾರ್ಡ್ ನಂ.3ಕ್ಕೆ ಸ್ಪರ್ಧಿಸಿರುವ ಶ್ರೀದೇವಿ ಚನ್ನಪ್ಪ ಹೊಟ್ಟಿ ಅವರ ಪರವಾಗಿ ಪಾದ ಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಚನ್ನೂರ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಭಿವೃದ್ಧಿ ಕೆಲಸಗಳು ಹಾಗೂ ಬಿಜೆಪಿ ಸರ್ಕಾರದ ದುರಾಡಳಿತವನ್ನು ಮತದಾರರಿಗೆ ವಿವರಿಸಿ ನಗರದ ಅಭಿವೃದ್ಧಿಗಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಅವರು ಮನವಿ ಮಾಡಿದರು.
ಮುಖಂಡರಾದ ಬನದಪ್ಪ ಅರಳಿ, ವಿಶ್ವನಾಥ ಮಾಲಿಪಾಟೀಲ್, ಮಲ್ಲು ಹುಂಡೆಕಲ್, ಆನಂದ ಸ್ವಾಮಿ, ಮಹೇಶ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.