ಎಸ್ಬಿಎಚ್ನಿಂದ ಉತ್ತೇಜನ
ಶಹಾಬಾದ್: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್ ರಾವೂರ ಘಟಕ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಿ ಗೌರವಿಸಲಾಗುತ್ತಿದೆ ಎಂದು ಎಸ್ಬಿಎಚ್ ರಾವೂರ ಶಾಖೆಯ ಪ್ರಬಂಧಕ ಅಶೋಕ ಕಾಳೆ ಹೇಳಿದರು.
ಗ್ರಾಮದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡುತ್ತ ಬ್ಯಾಂಕ್ ವತಿಯಿಂದ ನೀಡುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿದರು.
ಅತಿಥಿಗಳಾಗಿ ಗ್ರಾಪಂ ಸದಸ್ಯ ಶರಣು ಜ್ಯೋತಿ ಮಾತನಾಡಿ, ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಸಾಧನೆ ಮಾಡಲು ಎಸ್ಬಿಎಚ್ ಗ್ರಾಮ ಶಾಖೆ ಕೈಗೊಂಡ ಕ್ರಮವನ್ನು ಶ್ಲಾಘೀಸಿ, ಬ್ಯಾಂಕನವರು ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಪ್ರೋತ್ಸಾಹ ನೀಡಬೇಕೆಂದು ಸಲಹೆ ನೀಡಿದರು.
ಅತಿಥಿಗಳಾದ ಮಲ್ಲಿನಾಥ ಪಾಟೀಲ, ಕೆ.ರಮೇಶ ಭಟ್ಟ, ಮುಖ್ಯೋಪಾಧ್ಯಾಯಿನಿ ರೇಣುಕಾ, ಸಹ ಶಿಕ್ಷಕಿಯರಾದ ಅನ್ನಪೂರ್ಣಾ, ಶಿವಲೀಲಾ ಉಪಸ್ಥಿತರಿದ್ದರು. ಲತಾ ನಿರೂಪಿಸಿ ಸಿದ್ದಲಿಂಗ ಬಾಳಿ ಪ್ರಾಸ್ತಾವಿಕ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

