ಗುಲ್ಬರ್ಗಾ

ಅಭ್ಯರ್ಥಿಗಳ ಹಣೆಬರಹ ಇಂದು ಬಹಿರಂಗ

Published On :

ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಮಾ. 10
ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಅಂಗಳದಲ್ಲಿ ಸೋಮವಾರ ಮಾ. 11ರ ಬೆಳಗ್ಗೆ 8 ಗಂಟೆಯಿಂದ ಪಾಲಿಕೆ 55 ವಾರ್ಡ್‌ಗಳ ಮತ ಎಣಿಕೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಭಾನುವಾರ ಈ ಕೇಂದ್ರಗಳಲ್ಲಿನ ಸಿದ್ಧತೆಗಳನ್ನು ಖುದ್ದು ಜಿಲ್ಲಾಧಿಕಾರಿ ಡಾ. ಪ್ರಸನ್ನಕುಮಾರ್ ಪರಿಶೀಲಿಸಿದರು.
ಮತ ಎಣಿಕೆಗೆ ಸಜ್ಜು: ಸರ್ಕಾರಿ ಪಾಲಿಟೆಕ್ನಿಕ್‌ಗೆ ಭೇಟಿ ನೀಡಿ ಕೊನೆ ಹಂತದ ಸಿದ್ಧತೆಗಳನ್ನು ವೀಕ್ಷಿಸಿದರು. ಮತ ಎಣಿಕೆಗಾಗಿ ಒಟ್ಟು 11 ಕೋಣೆಗಳನ್ನು ಸಜ್ಜುಗೊಳಿಸಲಾಗಿದೆ. ಪ್ರತಿ ಕೋಣೆಗೆ 7 ಟೇಬಲ್‌ಗಳಂತೆ ಒಟ್ಟು 77 ಟೇಬಲ್‌ಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಸಲಾಗುವುದು. ಇದಕ್ಕಾಗಿ 165 ಸಿಬ್ಬಂದಿ, 11 ಚುನಾವಣಾಧಿಕಾರಿಗಳು ಹಾಗೂ 11 ಸಹಾಯಕ ಚುನಾವಣಾಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಸನ್ನಕುಮಾರ್ ಹೇಳಿದ್ದಾರೆ.
ತಾಲೂಕು ಕೇಂದ್ರಗಳಲ್ಲಿಯೂ ಮತ ಎಣಿಕೆ ಪ್ರಕ್ರಿಯೆಗಾಗಿ ಎರಡೆರಡು ಟೇಬಲ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. 66 ಸಿಬ್ಬಂದಿಯನ್ನು ಹಾಗೂ 22 ಚುನಾವಣಾಧಿಕಾರಿಗಳನ್ನು ಮತ ಎಣಿಕೆ ಪ್ರಕ್ರಿಯೆಗೆ ಬಳಸಿಕೊಳ್ಳಲಾಗುತ್ತಿದೆ ಎಂದರು.
ಬಿಗಿ ಬಂದೋಬಸ್ತ್: ಮತ ಎಣಿಕೆ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ದೃಷ್ಟಿಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಗುಲ್ಬರ್ಗ ನಗರದಲ್ಲಿ 2ಡಿಎಸ್‌ಪಿ, 6 ಸಿಪಿಐ, 20 ಎಎಸ್‌ಐ, 31 ಹೆಡ್ ಕಾನ್ಸ್‌ಟೇಬಲ್, 100 ಪೊಲೀಸ್ ಪೇದೆ, 21 ಮಹಿಳಾ ಪೊಲೀಸ್ ಪೇದೆ ಹಾಗೂ 50 ಹೋಂಗಾರ್ಡ್‌ಗಳನ್ನು ನಿಯೋಜಿಸಲಾಗಿದೆ ಎಂದರು. ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಮತದಾನವಾಗಿರುವುದರಿಂದ ಗುಲ್ಬರ್ಗ ನಗರದ 55 ವಾರ್ಡುಗಳ ಫಲಿತಾಂಶ  ಬೆಳಗ್ಗೆ 11 ಗಂಟೆಯೊಳಗಾಗಿ ಪ್ರಕಟಗೊಳ್ಳುವ ಸಾಧ್ಯತೆಗಳಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.