ದೇಶಪ್ರೇಮ ಉಸಿರಾಗಲಿ: ದೇಸಾಯಿ
ಹುಣಸಗಿ: ದೇಶದ ಭವಿಷ್ಯ ಅಡಗಿರುವುದು ಸದೃಢ ಯುವಕರಲ್ಲಿ. ಆದ್ದರಿಂದ ಯುವಕರು ದೇಶಪ್ರೇಮವನ್ನು ಉಸಿರಾಗಿಸಿಕೊಳ್ಳಬೇಕು. ಅದರಿಂದ ಮಾತ್ರ ಭವ್ಯ ಭಾರತ ನಿರ್ಮಾಣ ಸಾಧ್ಯ ಎಂದು ನಿವೃತ್ತ ಶಿಕ್ಷಕ ವೆಂಕಟರಾವ ದೇಸಾಯಿ ಹೇಳಿದರು. ಸಮೀಪದ ಬಲಶೆಟ್ಟಿಹಾಳದಲ್ಲಿ ಬಸವೇಶ್ವರ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸ್ವಾಮಿ ವಿವೇಕಾನಂದ ಪದವಿ ಕಾಲೇಜು ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಕರೇ ದೇಶದ ನಿಜವಾದ ಆಸ್ತಿಯಾಗಿದ್ದಾರೆ. ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯ ಕಾಪಾಡಿಕೊಳ್ಳುವುದರ ಜತೆಗೆ ರಾಷ್ಟ್ರದ ರಕ್ಷಣೆ ಮಾಡುವುದು ಯುವಕರ ಜವಾಬ್ದಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಬಾಂಬ್ ಸ್ಫೋಟ, ಮಹಿಳೆಯರ ಮೇಲಿನ ಅತ್ಯಾಚಾರ ಸೇರಿದಂತೆ ದೇಶದ ಭದ್ರತೆಗೆ ಧಕ್ಕೆ ತರುವ ಅನೇಕ ಘಟನೆಗಳು ನಡೆಯುತ್ತಿದೆ. ಯುವ ಪೀಳಿಗೆಯು ಅಣ್ಣಾ ಹಜಾರೆ, ಅರವಿಂದ ಕೇಜ್ರಿವಾಲ್ರ ಆದರ್ಶಗಳನ್ನು ಪಾಲಿಸಿಕೊಂಡು ಭ್ರಷ್ಟಾಚಾರ ರಹಿತ ದೇಶವನ್ನಾಗಿ ಮಾಡುವ ಏಕೈಕ ಗುರಿ ಹೊಂದಬೇಕು ಎಂದು ಹೇಳಿದರು. ಮುದನೂರ ಶಾಲೆಯ ಮುಖ್ಯ ಶಿಕ್ಷಕ ಶಿವರಾಜ ಬಿರಾದಾರ ಮಾತನಾಡಿದರು. ಅಧ್ಯಕ್ಷತೆಯನ್ನು ಡಾ. ಎಸ್.ಎಸ್. ಬಿರಾದಾರ ವಹಿಸಿದ್ದರು. ಪದವಿ ಕಾಲೇಜು ಪ್ರಾಚಾರ್ಯ ಐ.ಬಿ. ಮರೋಳ, ಬಸವರಾಜ ಬಿರಾದಾರ, ಹಣಮಂತ್ರಾಯ ಬೂದಿಹಾಳ, ರಾಯಪ್ಪ ಜೋಗಿನ್, ಮುತ್ತಣ್ಣ ಜಡಜಲಿ, ಉಪನ್ಯಾಸಕ ಟಿ.ಎಂ.ಚವ್ಹಾಣ, ಶಿವುಕುಮಾರ ವಿವೇಕಿ, ಎಸ್.ಎಂ. ಕಿರಣಗಿ, ಮಲ್ಲನಗೌಡ ಪಾಟೀಲ್ ಇತರರು ಇದ್ದರು. ಮಲ್ಲು ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

