ಮಹಿಳಾ ಸಬಲೀಕರಣದಿಂದ ಅಭಿವೃದ್ಧಿ
ಗುಲ್ಬರ್ಗ: ಮಹಿಳೆಯರು ಸಾಮಾಜಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ ಹಾಗೂ ಮಹಿಳಾ ಸಬಲೀಕರಣದಿಂದ ಮಾತ್ರ ಯಾವುದೇ ರಾಷ್ಟ್ರ ಅಭಿವೃದ್ಧಿಯಾಗುತ್ತದೆ ಎಂದು ಸಿಬ್ಬಂದಿ ಹಣಮಂತರಾವ್ ಪಾಟೀಲ್ ಅಭಿಪ್ರಾಯಪಟ್ಟರು.ಗುಲ್ಬರ್ಗ ತಾಲೂಕಿನ ಭೀಮಳ್ಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಜರುಗಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾಜಲ್ಲಿ ಸ್ತ್ರೀ- ಪುರಷರ ನಡುವೆ ಭೇದ- ಭಾವ ಮಾಡದೇ ಸಮಾನವಾಗಿ ಎಲ್ಲಾ ಸೌಲಭ್ಯಗಳನ್ನು ಮಹಿಳೆಯರಿಗೆ ಒದಗಿಸಿ, ಸಬಲೆಯನ್ನಾಗಿ ಮಾಡಿ ಸ್ವಸ್ಥ ಆರೋಗ್ಯಯುತ ಸಮಾಜದ ನಿರ್ಮಾಣ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು. ಶಿಕ್ಷಕಿ ಪಾರಮ್ಮ ಎಸ್. ಜ್ಯೋತಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಗುರು ಹೆಚ್. ವೀರಭದ್ರಪ್ಪಾ ಅಧ್ಯಕ್ಷತೆ ವಹಿಸಿದ್ದರು.
ಶಿಕ್ಷಕ ಬಸವರಾಜ ನಿಂಬರಗಿ, ಪಾರ್ವತಿ, ರಾಮು, ಸುರೇಶ, ಬೌರಮ್ಮ ಮುಂತಾದವರು ಭಾಗವಹಿಸಿದ್ದರು.
ವಿದ್ಯಾರ್ಥಿಗಳಾದ ಶಾಂತಾಬಾಯಿ, ಸಂಗಡಿಗರು ಪ್ರಾರ್ಥಿಸಿದರು. ಶಿಕ್ಷಕ ಸಂತೋಷಕುಮಾರ ಸ್ವಾಗತಿಸಿ, ರಾಮನಾಥ ವಂದಿಸಿದರು. ಶಿಲ್ಪಾರಾಣಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

