ಜ್ಯೋತಿಯೊಂದಿಗೆ ಲಿಂಗದ ದರ್ಶನ: ಶಾಸಕ
ಯಾದಗಿರಿ: ಮಹಾಶಿವರಾತ್ರಿಯ ಪುಣ್ಯ ದಿನದಂದು ಜ್ಯೋತಿಯೊಂದಿಗೆ ಪವಿತ್ರ ಸಿದ್ದಲಿಂಗೇಶ್ವರರ ದರ್ಶನವಾಗಿದೆ. ಇದು ಅಜ್ಞಾನದಿಂದ ಜ್ಞಾನದೆಡೆಗೆ ಸಾಗಲು ಬೆಳಕು ನೀಡಿದಂತಾಗಿದೆ ಎಂದು ಶಾಸಕ ಡಾ.ಎ.ಬಿ. ಮಾಲಕರಡ್ಡಿ ಹೇಳಿದರು.
ಶಹಾಪುರ ತಾಲೂಕಿನ ಗುರುಸುಣಿಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಅಯೋಜಿಸಲಾದ ಸಹಸ್ರ ದೀಪೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಕ್ತಾಧಿಗಳಲ್ಲಿ ಅಧ್ಯಾತ್ಮಿಕ ವಿಚಾರಗಳು ಮೂಡಿಬರಲಿ. ದೇವಸ್ಥಾನದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಈಗಾಗಲೇ ಗ್ರಾಮದಲ್ಲಿನ ಜನವಸತಿ ಪ್ರದೇಶವನ್ನು ಸುವರ್ಣ ಗ್ರಾಮ ಯೋಜನೆಯಡಿ ಮೂಲಭೂತ ಅನುಕೂಲತೆಗಳನ್ನು ಕಲ್ಪಿಸಲಾಗಿದೆ ಎಂದರು.
ಸಂತೋಷ ಇಮ್ಮಡಿ: ಮಾಜಿ ಶಾಸಕ ಡಾ. ವೀರಬಸವಂತರೆಡ್ಡಿ ಮುದ್ನಾಳ, ಈ ಭಾಗದ ಪ್ರಮುಖ ದೇವಾಲಯಗಳಲ್ಲಿ ಸಿದ್ದಲಿಂಗೇಶ್ವರ ದೇವಸ್ಥಾನ ಕೂಡ ಬಹಳ ಪ್ರಸಿದ್ಧವಾಗಿದೆ. ದೇವಸ್ಥಾನದ ಸಮಿತಿಯವರು ಮಹಾ ಶಿವರಾತ್ರಿ ಪ್ರಯುಕ್ತ ಸಹಸ್ರ ದೀಪೋತ್ಸವ ಕಾರ್ಯಕ್ರಮ ಆಯೋಜಿಸಿರುವುದು ಭಕ್ತರ ಸಂತೋಷ ಇಮ್ಮಡಿ ಮಾಡಿದೆ. ಇದೇ ರೀತಿ ಇನ್ನೂ ಹೆಚ್ಚಿನ ಕಾರ್ಯಕ್ರಮಗಳು ಹಮ್ಮಿಕೊಳ್ಳಬೇಕು ಎಂದರು. ಜಿಪಂ ಸದಸ್ಯ ದೇವರಾಜ್ ನಾಯಕ್, ಮಾಜಿ ಎಂಲ್ಸಿ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ, ಡಾ. ಶರಣಭೂಪಾಲರೆಡ್ಡಿ ನಾಯ್ಕಲ್, ಸಿದ್ರಾಮಪ್ಪಗೌಡ ಮಾತನಾಡಿದರು.
ಕಾರ್ಯಕ್ರಮದ ಮುನ್ನ ದೋರನಹಳ್ಳಿಯ ಮಹಾಂತೇಶ್ವರ ಮಠದ ವೀರಮಹಾಂತ ಶಿವಾಚಾರ್ಯರು, ಗುರುಸುಣಿಗಿ ದೇಶಿಕ ಬ್ರಹ್ಮಾನಂದ ಶರಣರು ಜ್ಯೋತಿ ಬೆಳಗಿಸುವ ಮೂಲಕ ಸಹಸ್ರ ದೀಪೋತ್ಸವಕ್ಕೆ ಚಾಲನೆ ನೀಡಿದರು. ದೇವಸ್ಥಾನದ ಅಧ್ಯಕ್ಷ ಚನ್ನಾರಡ್ಡಿ ಗೌಡ ಉಳ್ಳೆಸೂಗುರ, ಜಿಪಂ ಅಧ್ಯಕ್ಷೆ ಮರೆಮ್ಮಾ ಶಾಣ್ಯಾನೋರ್, ಶ್ರೀನಿವಾಸರಡ್ಡಿ ಪಾಟೀಲ್ ಚೆನ್ನೂರ, ಅಡಿವೆಪ್ಪ ವಡಿ, ಶರಣಭೂಪಾಲರಡ್ಡಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

