ದಾಳಿ ಖಂಡಿಸಿ ಮೌನ ಮೆರವಣಿಗೆ
ಯಾದಗಿರಿ: ಉಡುಪಿ ತಾಲೂಕಿನ ಕುದರೆಮಾಲೆ ಎಂಬಲ್ಲಿ ಪ್ರಾರ್ಥನಾ ಮಂದಿರದ ಮೇಲೆ ಬಜರಂಗ ದಳ ಕಾರ್ಯಕರ್ತರು ನಡೆಸಿದ ದಾಳಿ ಖಂಡಿಸಿ ಕ್ರಿಶ್ಚಿಯನ್ ಸಮುದಾಯದವರು ನಗರದಲ್ಲಿ ಬುಧವಾರ ಮೌನ ಪ್ರತಿಭಟನೆ ನಡೆಸಿದರು. ಬಲವಂತದ ಮತಾಂತರ ಮಾಡಲಾಗುತ್ತಿದೆ ಎಂಬ ವದಂತಿಯ ಬೆನ್ನು ಹತ್ತಿ ಕೆಲ ಸಂಘಟನೆಗಳು ಸಮುದಾಯದ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ಮಾಡುತ್ತಿರುವುದು ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೆಲವರು ಸಮಾಜ ಸ್ವಾಸ್ಥ್ಯ ಕೆಡಿಸಲು ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ ಎಂದರು. ರಾಜ್ಯದ ಹಲವಡೆ ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಯುತ್ತಿದೆ. ಇಂತಹ ಅಹಿತಕಾರಿ ಬೆಳವಣಿಗೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೀವ್ರ ನಿಗಾ ವಹಿಸಬೇಕೆಂದು ಆಗ್ರಹಿಸಿದರು. ರಾಜ್ಯದಲ್ಲಿ ಎಲ್ಲ ಸಮುದಾಯಗಳೊಂದಿಗೆ ಭಾವೈಕ್ಯದಿಂದ ಬದಕುತ್ತಿರುವ ಕ್ರೈಸ್ತ ಸಮುದಾಯಕ್ಕೆ ಸರ್ಕಾರ ರಕ್ಷಣೆ ನೀಡಬೇಕು, ಕಾನೂನು ಕೈಗೆತ್ತಿಕೊಳ್ಳುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರಿಗಿಸಬೇಕೆಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
--
ಕೋಲಿ ಸಮಾಜ ಪದಾಧಿಕಾರಿಗಳು
ಯಾದಗಿರಿ: ಟೋಕರಿ ಕೋಲಿ ಸಮಾಜದ ಜಿಲ್ಲಾ ಕೇಂದ್ರ ಕಾರ್ಯಾಲಯದಲ್ಲಿ ನೂತನ ವಡಗೇರಾ ತಾಲೂಕಿನ ಕೋಲಿ ಸಮಾಜದ ನೂತನ ತಾಲೂಕ ಘಟಕದ ಪದಾಧಿಕಾರಿಗಳನ್ನು ಸಮಾಜದ ರಾಜ್ಯಾಧ್ಯಕ್ಷ ವಿಠ್ಠಲ ಹೇರೂರ ಅವರ ನೇತೃತ್ವದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ತಿಳಿಸಿದ್ದಾರೆ. ಅಧ್ಯಕ್ಷರಾಗಿ ಭೀಮರಾವ ಎಚ್. ಬಾವೂರ, ಸಂಘಟನಾ ಕಾರ್ಯದರ್ಶಿಯಾಗಿ ಯಂಕಪ್ಪ ಆರ್.ಪಿಲ್ಲೆ, ಸೈದಪ್ಪ ಶಿವಪುರ, ಮಲ್ಲು ಹುಂಡೆಕಲ್, ಖಜಾಂಚಿಯಾಗಿ ಮರೆಪ್ಪ ಎಸ್. ಗುರುಸಿಣಿಗಿ, ಕಾರ್ಯಕಾರಿಣಿ ಮಂಡಳಿ ಸದಸ್ಯರಾಗಿ ನಿಂಗಪ್ಪ ಮಳ್ಳಳ್ಳಿ, ಸಿದ್ದಪ್ಪ ಎಸ್. ನಾಲ್ವಡಗಿ, ಬಸಲಿಂಗಪ್ಪ ಎಂ.ಕೊಂಕಲ್ ಅವರನ್ನು ಆಯ್ಕೆ ಮಾಡಲಾಗಿದೆ. ವಿಠ್ಠಲ ಹೇರೂರ್ ಮಾತನಾಡಿ, ಯಾದಗಿರಿ ಜಿಲ್ಲೆಯಲ್ಲಿ ಕೋಲಿ ಸಮಾಜದ ಜನ ಬಹುಸಂಖ್ಯಾತರಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಹಿಂದುಳಿದಿದ್ದಾರೆ. ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಅವರು ಹಗಲಿರುಳು ಶ್ರಮಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ವಡಗೇರಾ ತಾಲೂಕಿನ ನೂತನ ಅಧ್ಯಕ್ಷರು ಮುದ್ನಾಳ ಮಾರ್ಗದರ್ಶನದಲ್ಲಿ ಸಮಾಜವನ್ನು ಸಂಘಟನೆ ಮಾಡಬೇಕೆಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

