ಗುಲ್ಬರ್ಗಾ

ಕಳ್ಳತನ ಆರೋಪಿ ಸೆರೆ, ಆಭರಣ ವಶ

Published On :

ಯಾದಗಿರಿ: ಇಲ್ಲಿಯ ಬಸವೇಶ್ವರ ನಗರದ ಮನೆಯೊಂದರಲ್ಲಿ ಕೆಲ ದಿನಗಳ ಹಿಂದೆ ನಡೆದ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ. ಬಳ್ಳಾರಿಯ ಸೋಮಶೇಖರ ಬೋವಿ ಬಂಧಿತ ಆರೋಪಿ. ಕಳೆದ ಮಾ. 2ರಂದು ಬಸವೇಶ್ವರ ನಗರದ ವೆಂಕಟೇಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಸುಮಾರು 2 ಲಕ್ಷ ಮೌಲ್ಯದ ಚಿನ್ನಾಭರಣ  ಕಳ್ಳತನವಾಗಿತ್ತು. ಈ ಸಂಬಂಧ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ 1.60 ಲಕ್ಷ ಮೌಲ್ಯದ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಡಿಎಸ್ಪಿ ಎಸ್.ಡಿ. ಕಟ್ಟಿಮನಿ ಮಾರ್ಗದರ್ಶನದಲ್ಲಿ ಸಿಪಿಐ ಶಂಕರಗೌಡ ಪಾಟೀಲ, ಅಪರಾಧ ವಿಭಾಗದ ನಾಗಿರೆಡ್ಡಿ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.