ಇಂದು ಕೆಡಿಪಿ ಸಭೆ
ಗುಲ್ಬರ್ಗ: ಜಿಲ್ಲಾ ಪಂಚಾಯಿತಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(ಕೆಡಿಪಿ) ಹಾಗೂ ವಿಶೇಷ ಅಭಿವೃದ್ಧಿ ಯೋಜನೆ (ಎಸ್.ಡಿ.ಪಿ)ಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜಿಪಂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮಾ.18ರ ಬೆಳಗ್ಗೆ 11 ಗಂಟೆಗೆ ಜಿಪಂ ಹಳೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಪಂ ಸಿಇಒ ಪಲ್ಲವಿ ಆಕುರಾತಿ ತಿಳಿಸಿದ್ದಾರೆ.
ವಾಂತಿ, ಭೇದಿ
ಗುಲ್ಬರ್ಗ/ಶಹಾಬಾದ್: ಶಹಾಬಾದ್ ನಗರದ ವಾರ್ಡ್ 29ರ ಇಂದಿರಾ ನಗರ ಅಪ್ಪರ ಮಡ್ಡಿ ಪ್ರದೇಶದಲ್ಲಿ ಕಲುಷಿತ ನೀರು ಕುಡಿದು ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಗುರುವಾರ ಸಂಜೆಯಿಂದ ವಾಂತಿ, ಭೇದಿ ಕಾಣಿಸಿಕೊಂಡಿದ್ದು, ಸುಮಾರು 5 ಜನರಿಗೆ ಇಲ್ಲಿಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇನ್ನು ಕೆಲವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ವಾರ್ಡ್ ನಗರಸಭೆ ಸದಸ್ಯ ವೆಂಕಟೇಶ ದಂಡಗುಲಕರ್ ತಿಳಿಸಿದ್ದಾರೆ.
ಕಲುಷಿತ ನೀರು ಕಾರಣ: ಹಿಂದುಳಿದ ಅಪ್ಪರ ಮಡ್ಡಿ ಪ್ರದೇಶದಲ್ಲಿ ಏಕಾಏಕಿ ವಾಂತಿ ಭೇದಿ ಕಾಣಿಸಿಕೊಳ್ಳಲು ಕಲುಷಿತ ನೀರು, ನಗರದಲ್ಲಿ ನಳದ ಪೈಪ್ಗಳು ಅಲ್ಲಲ್ಲಿ ಒಡೆದು, ಕೊಳಚೆ ನೀರು ಪೈಪ್ನಲ್ಲಿ ಹರಿದು ಈ ಸಮಸ್ಯೆ ಉಂಟಾಗಲು ಕಾರಣ ಎನ್ನಲಾಗಿದೆ. ಈ ಬಗ್ಗೆ ನಗರಸಭೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಸ್ವಾಗತಕ್ಕೆ ಸಿದ್ಧತೆ
ಗುಲ್ಬರ್ಗ/ಶಹಾಬಾದ್: ಬಸವ ಜಯಂತಿ ಶತಮಾನೋತ್ಸವ ನಿಮಿತ್ತ ಮಾ. 18ರಂದು ಶಹಾಬಾದ ನಗರಕ್ಕೆ ಆಗಮಿಸುವ ಶರಣ ಸಂಸ್ಕೃತಿ ಮಹಾಯಾತ್ರೆಗೆ ಸ್ವಾಗತಕ್ಕೆ ಸಿದ್ಧತೆ ನಡೆದಿವೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

