ಅಭಿವೃದ್ಧಿಗೆ ಬಿಜೆಪಿ ಸರ್ಕಾರದ ಕೊಡುಗೆ ಅಪಾರ: ಶಾಸಕ ನರಿಬೋಳ
ಜೇವರ್ಗಿ: ಹಿಂದಿನ ಅನೇಕ ಸರ್ಕಾರಗಳು ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದ್ದರು. ಆದರೆ ರಾಜ್ಯ ಬಿಜೆಪಿ ಸರ್ಕಾರ ಹೇಳಿಕೊಳ್ಳದೆ ಅಭಿವೃದ್ಧಿ ಮಾಡಿ ತೊರಿಸಿದೆ ಎಂದು ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಹೇಳಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಅಲ್ಪ ದಿನಗಳಲ್ಲಿಯೆ ಮಹತ್ತರವಾದ ಯೋಜನೆಗಳನ್ನು ಜಾರಿಗೆ ತರಲಾಯಿತು. ಜೊತೆಗೆ ಹಿಂದೆಂದು ಕಂಡರಿಯದ ತಾಲೂಕಿನ ಸಮಗ್ರ ಅಭಿವೃದ್ಧಿ ಪಡಿಸುವುದರ ಜೊತೆಗೆ ಮಠ, ಮಾನ್ಯಗಳಿಗೂ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.
ಪಟ್ಟಣದಲ್ಲಿ ಬರುವ 19ರಂದು ಮಧ್ಯಾಹ್ನ 2ಕ್ಕೆ ಮಿನಿ ವಿಧಾನಸೌಧ, ಹೈಟೆಕ್ ಬಸ್ ನಿಲ್ದಾಣ ಉದ್ಘಾಟಿಸಿ ಎಪಿಎಂಸಿ ಆವರಣದಲ್ಲಿ ಮುಖ್ಯಮಂತ್ರಿ ಶೆಟ್ಟರ ಮಲ್ಲಾಬಾದ ಏತ ನೀರಾವರಿ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಚಿಗರಹಳ್ಳಿ- ಯಡ್ರಾಮಿ ಮಾರ್ಗವಾಗಿ ಯಂಕಂಚಿವರೆಗೆ 17 ಕೋಟಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದರು.
4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಯಾಳವಾರ ಮೊರಾರ್ಜಿ ವಸತಿ ಶಾಲೆ ಉದ್ಘಾಟನೆ, ಕೋನಾ ಹಿಪ್ಪರಗಾ- ಸರಡಗಿ ಸೇತುವೆ, ಬಸವೇಶ್ವರ ಪುತ್ತಳಿ ನಿರ್ಮಾಣ, ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ 12.45 ಕೋಟಿ ಅಂದಾಜು ವೆಚ್ಚದ 30 ಕಿ.ಮೀ ರಸ್ತೆ ಕಾಮಗಾರಿಗೆ, 5ನೇ ಹಂತದ ಸುವರ್ಣ ಗ್ರಾಮ ಯೋಜನೆಯಲ್ಲಿ 18 ಗ್ರಾಮಗಳ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗೆ ಉದ್ಘಾಟನೆ ಹಾಗೂ ಅಡಿಗಲ್ಲು ನೆರವೆರಲಿದೆ ಎಂದರು.
ಸಚಿವರಾದ ಆರ್.ಅಶೋಕ, ಬಸವರಾಜ ಬೊಮ್ಮಾಯಿ, ರೇವುನಾಯಕ ಬೆಳಮಗಿ, ನಾರಾಯಣಸ್ವಾಮಿ ಆಗಮಿಸಲಿದ್ದಾರೆಂದು ಎಂದು ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಮೇಶಬಾಬು ವಕೀಲ, ಡಾ. ಶಿವರಾಜ ಪಾಟೀಲ್ ಹರವಾಳ, ಶಿವು ಪಾಟೀಲ್, ಅನೀಲ ಇನಾಂದಾರ, ರಾಮು ಹರವಾಳ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

