ಗುಲ್ಬರ್ಗಾ

ವಿಗ್ರಹ ಕಳವು ಆರೋಪಿ ಪತ್ತೆಗೆ ಆಗ್ರಹ

Published On :

ಯಾದಗಿರಿ: ತಾಲೂಕಿನ ಪುರಾತನ ಗುಹಾಂತರ ದೇವಾಲಯ ಮೈಲಾಪುರದ ಮಲ್ಲಯ್ಯನ ದೇವಸ್ಥಾನದಲ್ಲಿ ದೇವರ ವಿಗ್ರಹ ಕಳವು ಘಟನೆ ನಡೆದಿರುವುದು ಭಕ್ತರ ಆತಂಕಕ್ಕೆ ಕಾರಣವಾಗಿದೆ. ತಕ್ಷಣ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕಲ್ಯಾಣ ಕರ್ನಾಟಕ ಯುವ ಸೇವೆ ಕಾರ್ಯಕರ್ತರು ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
  ಮೈಲಾಪುರದ ಮಲ್ಲಯ್ಯ ಸ್ವಾಮಿ ದೇವಸ್ಥಾನಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಹಾಗಿದ್ದೂ ಅಲ್ಲಿ ಕಳ್ಳತನ ನಡೆದಿರುವುದು ಆಶ್ಚರ್ಯಕರ ಸಂಗತಿಯಾಗಿದೆ.
  ಪ್ರಕರಣ ನಡೆದು ವಾರವೇ ಕಳೆದರೂ ಇದುವರೆಗೆ ಆರೋಪಿಗಳನ್ನು ಬಂಧಿಸಿಲ್ಲ. ಇದು ಸಾರ್ವಜನಿಕರಲ್ಲಿ ತಪ್ಪು ಸಂದೇಶ ಹೋಗಲು ಕಾರಣವಾಗಿದೆ. ಆದ್ದರಿಂದ ಯಾವುದೇ ಒತ್ತಡಕ್ಕೂ ಮಣಿಯದೇ ಆರೋಪಿಗಳನ್ನು ಬಂಧಿಸಿ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧ್ಯಕ್ಷ ರವಿ ಮುದ್ನಾಳ, ಲಕ್ಷ್ಮಣ ಪವಾರ, ವಿಷ್ಣು ದಾಸನಕೇರಿ, ನಿರಂಜನ್ ಎಸ್.ಕೆ., ಸುಧೀರ್, ಖುದ್ದೂಸ್, ಹಣಮಂತ್ರಾಯಗೌಡ, ಚಂದ್ರು, ಶಂಕರಗೌಡ, ಬಂದೇನವಾಜ್, ರಷೀದ್, ಅಲ್ಲಾಭಕ್ಷ, ಎಂ.ಡಿ.ಇಮ್ರಾನ್, ಸುನೀಲ್ ಇತರರು ಆಗ್ರಹಿಸಿ, ಅಪರ ಜಿಲ್ಲಾಧಿಕಾರಿ ಜಹೀರಾ ನಸೀಮ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.