ಗುಲ್ಬರ್ಗಾ

ಮಿಣಜಗಿ ತಾಂಡಾ; ನೀರಿನ ವ್ಯವಸ್ಥೆ ಕಲ್ಪಿಸಲು ಒತ್ತಾಯ

Published On :

ಗುಲ್ಬರ್ಗ: ಖಣದಾಳ ಜಿಪಂ ವ್ಯಾಪ್ತಿಯ ಮಿಣಜಗಿ ತಾಂಡಾದಲ್ಲಿ ಕೊಳವೆಬಾವಿಗಳ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗೆ ಒತ್ತಾಯಿಸಿ ತಾಂಡಾದ ಪ್ರಮುಖರು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ರಾಷ್ಟ್ರೀಯ ಗ್ರಾಮೀಣ ಕುಡಿವ ನೀರು ಸರಬರಾಜು ಯೋಜನೆ ಅಡಿಯಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡಬೇಕು. ಓವರ್ ಟ್ಯಾಂಕಿಗೆ ಮಿಣಜಗಿ ಗ್ರಾಮದ ಹತ್ತಿರ ತೆರೆದ ಬಾವಿಯಿಂದ ಪೈಪ್‌ಲೈನ್ ಮೂಲಕ ತಾಂಡಾಕ್ಕೆ ನೀರು ಸರಬರಾಜು ಮಾಡಬೇಕೆಂದು ಪರಶುರಾಮ ರಾಠೋಡ, ತಾರಾಸಿಂಗ್ ಜಾಧವ ಹಾಗೂ ಕುಮಾರ ರಾಠೋಡ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಅಧಿಕಾರಿಗಳು ಶೀಘ್ರವೇ ಭೇಟಿ ನೀಡಿ ಕುಡಿವ ನೀರಿನ ಸಮಸ್ಯೆ ಬಗೆಹರಿಸಬೇಕು. ವಿಳಂಬ ಮಾಡಿದರೆ ಹೋರಾಟ ಮಾಡಲಾಗುವುದೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.