ಗುಲ್ಬರ್ಗಾ

ಸುದ್ದಿ ಸಂಕ್ಷೇಪ

Published On :

ಇಂದು ನೀರಿಲ್ಲ
ಸುರಪುರ:
ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯವರ ಮುಖಾಂತರ ಹಾಕಿದ ನೀರು ಸರಬರಾಜು ವ್ಯವಸ್ಥೆಯಲ್ಲಿ ತಾಂತ್ರಿಕ ತೊಂದರೆ ಉಂಟಾಗಿರುವ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯ ನಡೆದಿದೆ. ಆದ್ದರಿಂದ ಗುರುವಾರ ಒಂದು ದಿನದ ಮಟ್ಟಿಗೆ ಪಟ್ಟಣದ ಜನತೆಗೆ ನೀರು ಸರಬರಾಜು ಮಾಡಲಾಗುವುದಿಲ್ಲ. ಕಾರಣ ನಾಗರಿಕರು ಸಹಕರಿಸಬೇಕೆಂದು ಪುರಸಭೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಪರೀಕ್ಷೆ: 2 ಡಿಬಾರ್
ಯಾದಗಿರಿ:
ನಗರದಲ್ಲಿ ಬುಧವಾರ ನಡೆದ ದ್ವಿತೀಯ ಪಿಯುಸಿ ಭೌತಶಾಸ್ತ್ರ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾ ಜಾಗೃತ ದಳ ಡಿಬಾರ್ ಮಾಡಿದೆ. ನಗರದ ನ್ಯೂ ಕನ್ನಡ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಭೌತಶಾಸ್ತ್ರ ಪರೀಕ್ಷೆ ವೇಳೆ ಇವರು ನಕಲು ಮಾಡುತ್ತಿದ್ದರು. ಇದನ್ನು ಪತ್ತೆ ಹಚ್ಚಿದ ಜಿಲ್ಲಾ ಜಾಗೃತ ದಳ ಅವರನ್ನು ಡಿಬಾರ್ ಮಾಡಿದೆ ಎಂದು ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಂಕ್ರಪ್ಪ ಗುಳಬಾಳ ತಿಳಿಸಿದ್ದಾರೆ.
ಸತತ ಪ್ರಯತ್ನ ಅಗತ್ಯ
ಯಾದಗಿರಿ:
ತಾಲೂಕಿನ ಸೈದಾಪುರದ ವಾಸವಿ ವಿದ್ಯಾಸಂಸ್ಥೆಯಲ್ಲಿ ಈಚೆಗೆ ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಜರುಗಿತು. ಮುಖ್ಯಾಧ್ಯಾಪಕ ಬಸವಲಿಂಗಪ್ಪ ವಡಗೇರಕರ್ ಮಾತನಾಡಿ, ಶ್ರದ್ಧ್ಧೆ, ಸಹನೆ, ಸತತ ಪ್ರಯತ್ನದ ಉತ್ತಮ ಕನಸಿನೊಂದಿಗೆ ಜೀವನದಲ್ಲಿ ಯಶಸ್ಸು ಸಾಧಿಸಬೇಕು. ಎಂದರು. ಶಿಕ್ಷಕ ಭೀಮಣ್ಣ ವಡವಟ್ ಇದ್ದರು. ಶಿವಕುಮಾರ, ಪಾರ್ವತಿ, ಶಿವಕುಮಾರ, ಸುಷ್ಮಿತಾ, ಪವನಕುಮಾರ, ಐಶ್ವರ್ಯ ಎಸ್ ಕೆ., ಐಶ್ವರ್ಯ ಬಿ., ಶಿವುಕುಮಾರ, ಮಲ್ಲಿಕಾರ್ಜುನ, ಐಶ್ವರ್ಯರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.