ಗುಲ್ಬರ್ಗಾ

ಅರಣ್ಯದಿಂದ ಮಣ್ಣಿನ ಸವಕಳಿ ತಡೆ ಸಾಧ್ಯ

Published On :

ಯಾದಗಿರಿ: ಅರಣ್ಯಗಳು ಮಣ್ಣಿನ ಸವಕಳಿ ತಡೆಯುವ ಮೂಲಕ ಅದರ ಗುಣಮಟ್ಟವನ್ನು ಕಾಪಾಡುತ್ತವೆ. ಅನೇಕ ಉತ್ಪನ್ನಗಳು ಹಾಗೂ ಸೇವೆಗಳನ್ನು ಒದಗಿಸುತ್ತವೆ. ಇವು ದೇಶದ ನೈಸರ್ಗಿಕ ಶ್ರೀಮಂತಿಕೆಯ ಸೂಚಕಗಳಾಗಿವೆ ಎಂದು ವಿಜ್ಞಾನ ಸಂಯೋಜಕ ಸೂರ್ಯಪ್ರಕಾಶ ಘನಾತೆ ಹೇಳಿದರು.
ತಾಲೂಕಿನ ಲಿಂಗೇರಿ ಸ್ಟೇಶನ್‌ನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಅರಣ್ಯ ದಿನಾಚರಣೆ ನಿಮಿತ್ತ ಉಪನ್ಯಾಸ ನೀಡಿದ ಅವರು, ಅರಣ್ಯಗಳು ಪರಿಸರಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡುತ್ತಿದ್ದು, ನವೀಕರಿಸಬಹುದಾದ ನೈಸರ್ಗಿಕ ಸಂಪನ್ಮೂಲಗಳು.
ಅರಣ್ಯಗಳು ಜಲಚಕ್ರವನ್ನು ಉಳಿಸುತ್ತವೆ. ವನ್ಯ ಪ್ರಾಣಿಗಳಿಗೆ ಅವು ವಾಸನೆಲೆ ಒದಗಿಸುತ್ತವೆ ಎಂದರು.
ಪ್ರಭಾರ ಮುಖ್ಯಾಧ್ಯಾಪಕ ಶ್ರೀನಿವಾಸ ಅಧ್ಯಕ್ಷತೆ ವಹಿಸಿದ್ದರು. ಭೀಮರಾಯ ತಳೆವಡಿ ಕಾರ್ಯಕ್ರಮ ನಿರೂಪಿಸಿದರು. ಮಂಜುಳ ವಂದಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚು ಮಕ್ಕಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.