ಸುದ್ದಿ ಸಂಕ್ಷೇಪ
ಟೈರ್ಗಳಿಗೆ ಬರ; 108 ಆ್ಯಂಬುಲನ್ಸ್ ಸೇವೆಗೆ ಗರ
ಯಾದಗಿರಿ: ಬಡ ಜನರಿಗೆ ತುರ್ತು ಆರೋಗ್ಯ ಸೇವೆ ಒದಗಿಸಲು ಸರ್ಕಾರ ಆರೋಗ್ಯ ಕವಚ 108 ಸೇವೆಯನ್ನು ಆರಂಭಿಸಿದೆ. ಆದರೆ ಕಳೆದ ಎಂಟು ದಿನಗಳಿಂದ ಟೈರ್ ಇಲ್ಲದೇ ವಡಗೇರಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 108 ವಾಹನ ನಿಂತಿದೆ. ಇದರಿಂದ ಆ ಭಾಗದ ರೋಗಿಗಳಿಗೆ ತುಂಬಾ ತೊಂದರೆಯಾಗುತ್ತದೆ ಎಂದು ಕರವೇ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಶರಣು ಇಟಗಿ ದೂರಿದ್ದಾರೆ. ಕಳೆದ ಮೂರು ತಿಂಗಳ ಹಿಂದೆಯೇ ಆರೋಗ್ಯ ಕವಚ ಸಿಬ್ಬಂದಿ ವಾಹನಕ್ಕೆ ಟೈರ್ಗಳು ಬೇಕು ಎಂದು ಜಿಲ್ಲಾ ಮೇಲ್ವಿಚಾರಣೆ ಅಧಿಕಾರಿ ಮೂಲಕ ಬೆಂಗಳುರಿನಲ್ಲಿರುವ ಕೇಂದ್ರ ಕಚೇರಿಗೆ ಮಾಹಿತಿ ಕೊಟ್ಟಿದ್ದಾರೆ. ಆದರೆ ಇಲ್ಲಿವರೆಗೂ ಈ ವಾಹನಕ್ಕೆ ಟೈರ್ಗಳು ಬಂದಿಲ್ಲ. ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ತುರ್ತು ಸೇವೆ ಸಿಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಈ ಭಾಗದ ರೋಗಿಗಳಿಗೆ ತುರ್ತು ಆರೋಗ್ಯ ಸೇವೆಗಾಗಿ ವಾಹನವಿಲ್ಲದಿರುವುದಿಂದ ಸಕಾಲದಲ್ಲಿ ರೋಗಿಗಳಿಗೆ ಚಿಕಿತ್ಸೆ ದೊರಕುತ್ತಿಲ್ಲ. ಇದರ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳನ್ನು ಕೇಳಿದರೆ ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳುತ್ತಿದ್ದಾರೆ. ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಿ ಗ್ರಾಮೀಣ ಭಾಗದ ಜನರಿಗೆ ತುತು ಸೇವೆ ನೀಡುವ ವಾಹನಕ್ಕೆ ಟೈರ್ ವ್ಯವಸ್ಥೆ ಕೈಗೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮತದಾರರ ಪಟ್ಟಿ ಹೆಸರು ಸೇರ್ಪಡೆಗೆ ಕಾಲಾವಕಾಶ
ಯಾದಗಿರಿ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿರುವ ಬಗ್ಗೆ ಪರಿಶೀಲಿಸಿ ಹೆಸರು ಇಲ್ಲದಿದ್ದಲ್ಲಿ ಏ.7ರೊಳಗೆ ಮತದಾರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ಎಫ್.ಆರ್. ಜಮಾದಾರ್ ತಿಳಿಸಿದ್ದಾರೆ. ಯಾದಗಿರಿ, ಶಹಾಪುರ, ಸುರಪುರ ಹಾಗೂ ಗುರುಮಠಕಲ್ ಕ್ಷೇತ್ರಗಳ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಒಂದು ವೇಳೆ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಪಕ್ಷದಲ್ಲಿ ತಕ್ಷಣ ಹೆಸರು ಸೇರಿಸಲು ಅರ್ಜಿ ಸಲ್ಲಿಸಬೇಕು. ಕುಟುಂಬದ ಸದಸ್ಯರು ಮರಣ ಹೊಂದಿದ್ದಲ್ಲಿ, ಸ್ಥಳಾಂತರ ಹೊಂದಿದ್ದಲ್ಲಿ ಅಂಥವರ ಹೆಸರು ತೆಗೆದುಹಾಕಲು ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ತಿದ್ದುಪಡಿ ಮಾಡಬೇಕಾದಲ್ಲಿ ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಏ.7ರ ವರೆಗೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮತದಾರರು ತಮ್ಮ ಹೆಸರು, ಲಿಂಗ, ವಯಸ್ಸು ನಮೂದು ಬಗ್ಗೆ ಸರಿಪಡಿಸಿಕೊಳ್ಳಬೇಕು. ಒಬ್ಬ ಮತದಾರರ ಹೆಸರು ಒಂದಕ್ಕಿಂತ ಹೆಚ್ಚಿನ ಕಡೆ ಇದ್ದಲ್ಲಿ ಅದು ಕಾನೂನು ರೀತಿಯಲ್ಲಿ ಅಪರಾಧವಾಗುತ್ತದೆ. ಕಾರಣ ತಕ್ಷಣ ಈ ಕುರಿತು ಪರಿಶೀಲಿಸಿಕೊಂಡು ಒಂದೇ ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇರುವಂತೆ ನೋಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಮತದಾರರ ಪಟ್ಟಿ ದೋಷರಹಿತವಾಗಿ ಸಿದ್ಧಪಡಿಸಲು ಎಲ್ಲ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

