ಸಾಕು ಅಂದವ ಶ್ರೀಮಂತ: ಡಾ. ಪಾಲಾದಿ
ಕನ್ನಡಪ್ರಭ ವಾರ್ತೆ, ಯಾದಗಿರಿ, ಮಾ.24
ಸಾಕು ಅಂದವ ಶ್ರೀಮಂತ, ಬೇಕು ಅಂದವ ಬಡವ. ಮಾನವನ ಅತಿಯಾದ ಆಸೆಯಿಂದ ಮಾನವೀತೆಯನ್ನು ಮರೆತು ಜೀವನವನ್ನು ಮಾಡುತ್ತಿದ್ದಾನೆ. ಇದರಿಂದ ತನ್ನತನವನ್ನು ಕಳೆದುಕೊಳ್ಳುತ್ತಿದ್ದಾನೆ. ಆಸೆಗೆ ಮಿತಿ ಹಾಕಿ ಜೀವನ ರೂಪಿಸಿಕೊಂಡರೆ ಸಮಾಜದಲ್ಲಿ ಆರೋಗ್ಯವಂತರಾಗಿ ಬದಕಬಹುದು ಎಂದು ನಿವೃತ್ತ ವೈದ್ಯಾಧಿಕಾರಿ ಡಾ. ಬಿ.ಟಿ. ಪಾಲಾದಿ ಅಭಿಪ್ರಾಯಪಟ್ಟರು.
ತಾಲೂಕಿನ ಸೈದಾಪುರದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ಭವಿಷ್ಯದ ನಾಗರಿಕರಾದ ವಿದ್ಯಾರ್ಥಿಗಳು ಹಿರಿಯರ, ಪೋಷಕರ ವಿಶ್ವಾಸವನ್ನು ಗಳಿಸಿಕೊಳ್ಳಬೇಕು. ಅದಕ್ಕಾಗಿ ಆತ್ಮೀಯವಾದ ಮಾತು, ರುಚಿಕರವಾದ ಆಹಾರ ಪದ್ಧತಿ ರೂಡಿಸಿಕೊಳ್ಳಬೇಕು. ನೈತಿಕ ವಿಚಾರಗಳನ್ನು ಪೋಷಕರು ತಮ್ಮ ಮಕ್ಕಳಿಗೆ ನೀಡಬೇಕೆಂದು ಕಿವಿಮಾತು ಹೇಳಿದರು. ಯಾವುದೇ ಕಾರ್ಯವನ್ನು ಮಾಡುವಾಗ ಅಂತರಂಗ ಹಾಗೂ ಬಹಿರಂಗದಿಂದ ಶುದ್ಧರಾಗಿರಬೇಕು. ಇದಕ್ಕಾಗಿ ಕಷ್ಟಪಟ್ಟು ದುಡಿಯುವ ನಾಗರಿಕರಗಾಬೇಕೆಂದು ಹಾರೈಹಿಸಿದರು.
ಶಿಕ್ಷಕ ವೃತ್ತಿ ಶ್ರೇಷ್ಠ: ಡಿಇಡಿ ಕಾಲೇಜಿನ ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ, ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದದು. ಮಕ್ಕಳಿಗೆ ಬೋಧನೆ ಮಾಡುವ ನಾವು ಆಳವಾದ ಅಧ್ಯಯನ ಮಾಡಬೇಕು. ವಿದ್ಯಾರ್ಥಿಗಳಿಗೆ ಮಾದರಿಯಾದ ವ್ಯಕ್ತಿತ್ವ ಶಿಕ್ಷಕರಲ್ಲಿದ್ದಾಗ ಉತ್ತಮ ಗೌರವ ದೊರೆಯುತ್ತದೆ ಎಂದರು.
ಪರೀಕ್ಷೆಯಲ್ಲಿನ ಫಲಿತಾಂಶವನ್ನು ಸಕರಾತ್ಮಕವಾಗಿ ಪಡೆದುಕೊಳ್ಳಬೇಕು. ನಮ್ಮ ಸಾಮರ್ಥ್ಯದೊಂದಿಗೆ ಅದನ್ನು ಪರಿಗಣಿಸಿ ಆ ಮೂಲಕ ಮುಂದಿನ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಹಾಗೂ ಸಂಸ್ಥೆಯ ಅಧ್ಯಕ್ಷ ಶರಣಿಕಕುಮಾರ ದೋಖಾ, ಸಂಸ್ಥೆಯ ಮಾಜಿ ಉಪಾಧ್ಯಕ್ಷ ಮಲ್ಲರೆಡ್ಡೆಪ್ಪಗೌಡ ಕಣೇಕಲ್, ಕಾರ್ಯದರ್ಶಿ ಗೋವಿಂದಪ್ಪ ಕಣೇಕಲ್, ಅಭಯಕುಮಾರ ದೋಖಾ ಇದ್ದರು.
ಮುಖ್ಯಗುರು ಬಿ.ಬಿ. ಹೆಬ್ಬಾಳೆ ಸ್ವಾಗತಿಸಿದರು. ಸಿದ್ದಪ್ಪ ಕಾರ್ಯಕ್ರಮ ನಿರೂಪಿಸಿದರು. ಶ್ವೇತಾ ರಾಘವೇಂದ್ರ ಪೂರಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

