ಗುಲ್ಬರ್ಗಾ

ಶ್ರೀರಾಮುಲು ಬಂಧನ ಖಂಡಿಸಿ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ   ಜೇವರ್ಗಿ   ಮಾ.24
ಬೀದಿ ವ್ಯಾಪಾರಸ್ಥರ ಹಿತದೃಷ್ಟಿಯಿಂದ ಬಳ್ಳಾರಿಯಲ್ಲಿ ಬಿಎಸ್‌ಆರ್ ಪಕ್ಷದ ಮುಖಂಡ ಶ್ರೀರಾಮುಲು ಹಾಗೂ ಜೆ. ಶಾಂತಾ ನಡೆಸುತ್ತಿರುವ ಹೋರಾಟವನ್ನು ಹಿಮ್ಮೆಟ್ಟಿಸಲು ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಸ್ಥಳಿಯ ಬಿಎಸ್‌ಆರ್‌ಕೆ ಪಕ್ಷದ ಕಾರ್ಯಕರ್ತರು ಸರ್ಕಾರ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಅಖಂಡೆಶ್ವರ ವೃತ್ತದಿಂದ ತಹಸೀಲ್ದಾರ್ ಕಚೇರಿಗೆ ತೆರಳಿ ರಾಜ್ಯ ಸರ್ಕಾರದ ವಿರುದ್ಧ ಬಳ್ಳಾರಿ ನಗರದ ರಸ್ತೆ ವ್ಯಾಪಾರಸ್ಥರು ಹಾಗೂ ಬೀದಿ ವ್ಯಾಪಾರಸ್ತರು ತಮ್ಮ ಮೂಲ ಸೌಲಭ್ಯಗಳಿಗೆ ಆಗ್ರಹಿಸಿ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ಶ್ರೀರಾಮಲು ಹಾಗೂ ಬಳ್ಳಾರಿ ಸಂಸದೆ ಜೆ. ಶಾಂತಾ ಅವರ ನೇತೃತ್ವದಲ್ಲಿ ಶನಿವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಅವರ ಬೇಡಿಕೆಗಳಿಗೆ ಸ್ಪಂದಿಸದೆ, ನೇರವಾಗಿ ಶ್ರೀರಾಮುಲು ಹಾಗೂ ಜೆ. ಶಾಂತಾರವರನ್ನು ಬಂಧಿಸಿರುವುದು ಖಂಡಿಸಿದರು.
ಬಳ್ಳಾರಿ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಬೇಕು, ನ್ಯಾಯಯುತ ಬೇಡಿಕೆಗಳು ಈಡೇರಿಸುವಂತೆ ಹೋರಾಟ ಮಾಡುತ್ತಿದ್ದ ರಾಮುಲು ಹಾಗೂ ಜೆ. ಶಾಂತಾರವರನ್ನು ಬಂಧಿಸಿರುವುದು ರಾಜ್ಯ ಸರ್ಕಾರವು ಹೋರಾಟವನ್ನು ಹತ್ತಿಕ್ಕುವ ಉದ್ದೇಶವಾಗಿದೆ ಎಂದು ತಾಲೂಕು ಅಧ್ಯಕ್ಷರಾದ ಧನರಾಜ ರಾಠೋಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪರಮೇಶ್ವರ ಬಿರಾಳ, ರಾಜಶೇಖರ ಮುತ್ತಕೋಡ, ರಾಮನಾಥ ಬಂಡಾರಿ, ಗೋಪಾಲ್ ಚಟ್ನಳ್ಳಿ, ಮಲ್ಲಿಕಾರ್ಜುನ ನೇಲೋಗಿ, ಸಿದ್ದು ಕೆಲ್ಲೂರ, ಖಲಿಮ್ ಖಾನ್, ರಾಜು ಹವಾಲ್ದಾರ್, ವಿಶ್ವರಾಧ್ಯ ಸುಭೇದಾರ, ಭೀಮರಾಯ ಹನ್ನೂರ, ನಿಂಗು ಅವರಾದ, ಪರಮಾನಂದ ನೇಲೋಗಿ, ಪ್ರಕಾಶ ಕಾಸರಬೋಸಗಾ, ರಮೇಶ ಹಾಲಗಡ್ಲ ಸೇರಿದಂತೆ ಹಲವಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.