ಮಹಾನಗರ ಪಾಲಿಕೆ ಸದಸ್ಯರಿಗೆ ಸನ್ಮಾನ (ಸುದ್ದಿ ಸಂಕ್ಷೇಪ)
ಗುಲ್ಬರ್ಗ: ಇತ್ತೀಚೆಗೆ ನೂತನವಾಗಿ ಆಯ್ಕೆಯಾದ ವಾರ್ಡ್ ನಂ. 36ರ ಮಹಾನಗರ ಪಾಲಿಕೆ ಸದಸ್ಯ ಪರಶುರಾಮ ಹೋಳ್ಕರ್ ಮತ್ತು ವಾರ್ಡ್ ನಂ. 40ರ ನಾಗರಾಜ ಗುಂಡಗುರ್ತಿ ಅವರನ್ನು ಓಂ ಸಾಯಿ ಪ್ರತಿಷ್ಠಾನ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಓಂ ಸಾಯಿ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಕಾಶಿನಾಥ ಶಾಹಾಬಾದಕರ್, ಉಪಾಧ್ಯಕ್ಷ ಸಿದ್ರಾಮ ಕಟ್ಟಿಮನಿ, ಪ್ರಧಾನ ಕಾರ್ಯದರ್ಶಿ ಸುಧೀರ ಜಿ. ತೆಲಂಗಿ, ಸಂಘಟನಾ ಕಾರ್ಯದರ್ಶಿ ಶರಣಪ್ಪ ಮಾಡಬುಳಕರ್, ಈಶ್ವರ ಕಾಳನೂರ, ಮಹಾದೇವ ಕಟ್ಟಿಮನಿ, ಪತ್ರಿಕಾ ಕಾರ್ಯದರ್ಶಿ ಪರಮೇಶ್ವರ ನಿಲೂರಕರ್, ರಿಯಾಜ್ ಮಿಯಾ ಸರಡಗಿ, ಯಲ್ಲಪ್ಪ ಹಳ್ಳಿ, ಪರಮೇಶ್ವರ ಡಬರಬಾದಿ ಮತ್ತು ಬಡಾವಣೆಯ ಅನೇಕ ಮುಖಂಡರು ಉಪಸ್ಥಿತರಿದ್ದರು.
'ದಿನಾಚರಣೆ ಮಾಡಿ'
ಚಿತ್ತಾಪುರ: ತಾಲೂಕಿನಲ್ಲಿ ಪ್ರತಿ ವರ್ಷದಂತೆ ಹಸಿರು ಕ್ರಾಂತಿ ಹರಿಕಾರ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಂ ಅವರ ಜನ್ಮ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಕ್ರಮ ಕೈಗೊಳ್ಳಬೇಕೆಂದು ಬಾಬು ಜಗಜೀವನರಾಂ ಅಭಿವೃದ್ಧಿ ಹೋರಾಟ ಸಮಿತಿ ತಾಲೂಕು ಅಧ್ಯಕ್ಷ ರಾಜಣ್ಣ ಕರದಾಳ ಒತ್ತಾಯಿಸಿದ್ದಾರೆ. ಅವರು ತಹಸೀಲ್ದಾರ್ಗೆ ನೀಡಿದ ಮನವಿ ಪತ್ರದಲ್ಲಿ ಏಪ್ರಿಲ್ 5 ರಂದು ಎಲ್ಲಾ ಸರ್ಕಾರಿ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಎಲ್ಲ ಕಚೇರಿಗಳಲ್ಲಿ ಜಯಂತಿ ಆಚರಿಸಿ ಮಹಾನ್ ನಾಯಕರ ಜನ್ಮ ದಿನಕ್ಕೆ ಶೋಭೆ ತರಲು ಸೂಕ್ತ ಮಾರ್ಗದರ್ಶನ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.
ಮದ್ಯಪಾನ ನಿಷೇಧ
ಗುಲ್ಬರ್ಗ: ಹೋಳಿ ಹಬ್ಬವನ್ನು ಶಾಂತಿಯುತವಾಗಿ ಆಚರಣೆಯ ಹಿನ್ನೆಲೆಯಲ್ಲಿ ಮಾ.25ರ ಮಧ್ಯರಾತ್ರಿ 12 ಗಂಟೆಯಿಂದ ಮಾ.27ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲ ತರಹದ ಮಾದಕ ವಸ್ತುಗಳ ಮಾರಾಟ ಮಾಡುವುದನ್ನು ನಿಷೇಧಿಸಿ, ಮದ್ಯ ಸರಬರಾಜು ಮಾಡುವ ಅಂಗಡಿಗಳನ್ನು ಮುಚ್ಚುವಂತೆ ಡಿಸಿ ಆದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

