ಕೊಳವೆ ಬಾವಿಗೆ ಆಗ್ರಹ
ಯಾದಗಿರಿ: ಶಹಾಪುರ ತಾಲೂಕಿನ ಕಾಡಂಗೇರಾ (ಬಿ) ಮತ್ತು ತಡಬಿಡಿ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಕೊಳವೆಬಾವಿ ತೋಡಿಸಿ ಕುಡಿವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಹಯ್ಯಾಳ ಕರವೇ ಹೋಬಳಿ ಘಟಕದ ಅಧ್ಯಕ್ಷ ರವಿಕುಮಾರ ದೇವರಮನಿ ಆಗ್ರಹಿಸಿದ್ದಾರೆ. ಈ ಕುರಿತು ಜಿಪಂ ಸಿಇಒಗೆ ಮನವಿ ಪತ್ರ ಸಲ್ಲಿಸಿರುವ ಅವರು, ಈ ಎರಡು ಗ್ರಾಮಸ್ಥರು ಕುಡಿವ ನೀರಿಗಾಗಿ ಸುಮಾರು ಒಂದು ಕಿಮಿ ದೂರ ಹೋಗುವಂತಾಗಿದೆ. ಇದರ ಬಗ್ಗೆ ಸಂಬಂಧಪಟ್ಟ ಅಭಿಯಂತರರಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಾಡಂಗೇರಾ (ಬಿ) ಹಾಗೂ ತಡಬಿಡಿ ಎರಡನೇ ಬ್ಲಾಕ್ನಲ್ಲಿ ಬೋರವೆಲ್ ಹಾಕಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸಿದ್ದು ಕಾಡಂಗೇರಾ, ಕುಮಾರ, ಶರಣು, ಸುಭಾಶ, ವೆಂಕಟೇಶ, ಸಾಬಣ್ಣ ಆಗ್ರಹಿಸಿದ್ದಾರೆ.
ರಸ್ತೆ ಅಪಘಾತ: ವ್ಯಕ್ತಿ ಸಾವು
ಶಹಾಪುರ: ಸಮೀಪದ ಭೀಮರಾಯನಗುಡಿ ಬಳಿ ದ್ವಿಚಕ್ರ ವಾಹನ ಮತ್ತು ಬೊಲೇರೊ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮದ್ರಿಕಿ ಗ್ರಾಮದ ಮಹಾಂತಗೌಡ ಅಯ್ಯಪ್ಪಗೌಡ ಹೊಸ್ಮನಿ (44) ಮೃತಪಟ್ಟವರು. ಅತಿ ವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಭೀಮರಾಯನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

