ವಿದ್ಯುತ್ ವಿತರಣಾ ಕೇಂದ್ರ ಆರಂಭಿಸಲು ಕರವೇ ಆಗ್ರಹ
ಕ.ಪ್ರ. ವಾರ್ತೆ, ಹುಣಸಗಿ, ಮಾ.26
ಕಳೆದ ವರ್ಷ ಕೊಡೇಕಲ್ ಹೊರವಲಯದಲ್ಲಿ ನಿರ್ಮಿಸಿದ್ದ 33 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರ ಪ್ರಾರಂಭಿಸಲು ಆಗ್ರಹಿಸಿ ಕೊಡೇಕಲ್ ವಲಯ ಕರವೇ ವತಿಯಿಂದ ಹುಣಸಗಿ ಶಾಖಾಧಿಕಾರಿ ಶ್ರೀಶೈಲ ತಮದೊಡ್ಡಿಗೆ ಮನವಿ ಸಲ್ಲಿಸಿದರು.
ಈ ಕುರಿತು ರಮೇಶ ಬಿರಾದರ ಮಾತನಾಡಿ, ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮೀಪಿಸುತ್ತಿದ್ದು ವಿದ್ಯಾರ್ಥಿಗಳಿಗೆ ಸಮರ್ಪಕ ವಿದ್ಯುತ್ ಇಲ್ಲದೇ ಅಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಈ ಕುರಿತು ಹಲವು ಬಾರಿ ಮೌಖಿಕ ಮತ್ತು ಲಿಖಿತ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಕಾರ್ಯನಿರ್ವಾಹಕ ಎಂಜಿನಿಯರ್ ಒಂದು ವಾರದಲ್ಲಿ ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸಿ ಕೊಡೇಕಲ್ 33 ಕೆವಿ ವಿದ್ಯುತ್ ವಿತರಣಾ ಕೇಂದ್ರ ಕಾರ್ಯಾರಂಭ ಮಾಡದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ನುಡಿದರು.
ರೈತರ ನೆರವಿಗೆ ಮುಂದಾಗಿ: ಕುಮಾರ ಹಿರೇಮಠ ಮಾತನಾಡಿ, ಸುಮಾರು 40ಕ್ಕೂ ಹೆಚ್ಚು ಹಳ್ಳಿಯ ರೈತರು ಈ ಘಟಕ ಯಾವಾಗ ಪ್ರಾರಂಭವಾಗುತ್ತದೆ ಎಂದು ಕಾಯುತ್ತಿದ್ದಾರೆ. ಒಂದು ವರ್ಷದಿಂದಲೂ ಪ್ರಾರಂಭವಾಗುತ್ತದೆ ಎಂದು ಅಧಿಕಾರಿಗಳು ಹೇಳಿತ್ತಾ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಕೊಡೇಕಲ್, ಭಪ್ಪರಗಿ, ಹೊರಹಟ್ಟಿ, ಬರದೇವನಾಳ, ಮಾರನಾಳ ಸೇರಿದಂತೆ ಅನೇಕ ಹಳ್ಳಯ ಸಾವಿರಾರು ರೈತರಿಗೆ ಈ ವಿತರಣಾ ಕೇಂದ್ರದಿಂದ ಅನುಕೂಲವಾಗಲಿದ್ದು, ಬೇಗನೆ ಪ್ರಾರಂಭಿಸಿ ರೈತರ ನೆರವಿಗೆ ಬರಬೇಕೆಂದು ಒತ್ತಾಯಿಸಿದರು.
ಹಸನಸಾಬ ಹಾವರಗಿ, ತಿಪ್ಪಣ್ಣ ಉಪ್ಪಲದಿನ್ನಿ, ಗುಂಡು ರಾಜವಾಳ, ರಮೇಶ ಕಿರದಳ್ಳಿ, ರಮೇಶನಾಯಕ ಮತ್ತಿತರರು ಇದ್ದರು. ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಬರೆದ ಮನವಿ ಪತ್ರವನ್ನು ಜೆಸ್ಕಾಂ ಹುಣಸಗಿ ಶಾಖಾಧಿಕಾರಿಗಳಿಗೆ ಸಲ್ಲಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

