ಪ್ರೊ. ಕಟ್ಟಿಮನಿ ಸಾಹಿತ್ಯ ಪುರಸ್ಕಾರ ಪ್ರಕಟ
ಕ.ಪ್ರ. ವಾರ್ತೆ ಗುಲ್ಬರ್ಗ ಮಾ.27
ಪ್ರೊ. ತೇಜಸ್ವಿ ಕಟ್ಟಿಮನಿ ಸಾಹಿತ್ಯ ಪುರಸ್ಕಾರಕ್ಕೆ ಸಾಹಿತಿ ಡಾ. ಟಿ.ಡಿ. ರಾಜಣ್ಣ ತಗ್ಗಿ ಅವರ 'ಕಾಮಕೂಪ' ಮತ್ತು ಕವಿ ವಿಠ್ಠಲ್ ದಳವಾಯಿ ಅವರ 'ಬೋಧಿ ನೆರಳಿನ ದಾರಿ' ಕೃತಿಗಳು ಆಯ್ಕೆಯಾಗಿವೆ.
ಸಾಹಿತ್ಯ, ಸಂಸ್ಕೃತಿ, ಭಾಷೆಯ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ಮತ್ತು ನಿರ್ಲಕ್ಷ್ಯಕ್ಕೆ ಒಳಗಾದವರ ಕಲ್ಯಾಣಕ್ಕಾಗಿ ಮತ್ತು ಪ್ರಕೃತಿ ವಿಕೋಪಕ್ಕೆ ತುತ್ತಾದವರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಧಾರವಾಡದಲ್ಲಿ ಅಸ್ತಿತ್ವಕ್ಕೆ ಬಂದದ್ದು ಪ್ರೊ. ತೇಜಸ್ವಿ ಕಟ್ಟಿಮನಿ ಟ್ರಸ್ಟ್.
ಈ ಟ್ರಸ್ಟ್ ಕಳೆದ ಮೂರು ವರ್ಷಗಳಿಂದ ಕನ್ನಡ ಸಾಹಿತ್ಯದಲ್ಲಿ ಹೊಸತನ ತಂದುಕೊಡುವ ಕೃತಿಗಳಿಗೆ ಸಾಹಿತ್ಯ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸುತ್ತ ಬಂದಿದೆ. ಪ್ರಸಕ್ತ ವರ್ಷದ ಸಾಹಿತ್ಯ ಪುರಸ್ಕಾರಕ್ಕೆ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಟಿ.ಡಿ. ರಾಜಣ್ಣ ತಗ್ಗಿ ಅವರ ಅನುವಾದ ಕೃತಿ 'ಕಾಮಕೂಪ' ಮತ್ತು ಕವಿ ವಿಠ್ಠಲ್ ದಳವಾಯಿ ಅವರ ಕವನ ಸಂಕಲನ 'ಬೋಧಿ ನೆರಳಿನ ದಾರಿ' ಕೃತಿಗಳು ಆಯ್ಕೆಗೊಂಡಿವೆ.
ಈ ಪುರಸ್ಕಾರ 10 ಸಾವಿರ ನಗದು, ಪ್ರಶಸ್ತಿ ಪತ್ರ ಮತ್ತು ಫಲಕವನ್ನು ಒಳಗೊಂಡಿರುತ್ತದೆ. ಏಪ್ರಿಲ್ನಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

