31, ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ
ಸುರಪುರ: ಆದರ್ಶ ವಿದ್ಯಾಲಯದ ತಾಲೂಕು ಮಟ್ಟದ ಪ್ರವೇಶ ಪರೀಕ್ಷೆ ಮಾ.31ರಂದು ಬೆ.10.30ಕ್ಕೆ ಜರುಗಲಿದೆ. ಪರೀಕ್ಷೆ ಸುಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಪಟ್ಟಣದಲ್ಲಿ ಎರಡು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ವಿ. ಕೆಂಪರಂಗಯ್ಯ ತಿಳಿಸಿದ್ದಾರೆ.
6ನೇ ತರಗತಿಯ ಆಂಗ್ಲ ಮಾಧ್ಯಮ ಶಾಲೆಗೆ ಆಯ್ಕೆ ಬಯಸಿ ಒಟ್ಟು 640 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನೀಡಲಾಗಿದೆ. ಪ್ರವೇಶ ಪತ್ರ ತಲುಪದ ವಿದ್ಯಾರ್ಥಿಗಳು ಸಂಬಂಧಿಸಿದ ಸಿಆರ್ಪಿಗಳನ್ನು ಸಂಪರ್ಕಿಸಬೇಕು ಎಂದು ಕೋರಿದ್ದಾರೆ.
ನೋಂದಣಿ ಸಂ. 001ರಿಂದ 318ರ ವರೆಗೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು(ದರ್ಬಾರ್), 319ರಿಂದ 640ರ ವೆರೆಗೆ ಸರ್ಕಾರಿ ಬಾಲಕರ ಪಪೂ ಕಾಲೇಜು ಸುರಪುರದಲ್ಲಿ ನಡೆಯಲಿದೆ. ಶಿಕ್ಷಕರು, ಪಾಲಕರು ವಿದ್ಯಾರ್ಥಿಗಳನ್ನು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಕರೆತರಬೇಕು. ಪರೀಕ್ಷಾರ್ಥಿಗಳು ಬೆ.10ಕ್ಕೆ ಪರೀಕ್ಷಾ ಕೊಠಡಿಯಲ್ಲಿ ಹಾಜರಿರಬೇಕೆಂದು ಬಿಇಒ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

