ಕಾಂಗ್ರೆಸ್ ಕಾರ್ಯಕರ್ತರು ಕೆಜೆಪಿಗೆ
ಯಾದಗಿರಿ: ಕಾಂಗ್ರೆಸ್ನಲ್ಲಿನ ಆಂತರಿಕ ಸಮಸ್ಯೆಗಳಿಗೆ ಬೇಸತ್ತು ವಿಧಾನಸಭಾ ಕ್ಷೇತ್ರದ ಎಲ್ಲ ಗ್ರಾಮಗಳಿಂದಲೂ ಆ ಪಕ್ಷದ ಕಾರ್ಯಕರ್ತರು ಕೆಜೆಪಿಯತ್ತ ಬರುತ್ತಿದ್ದಾರೆ ಎಂದು ಕೆಜೆಪಿ ಅಭ್ಯರ್ಥಿ ಡಾ. ವೀರಬಸವಂತರಡ್ಡಿ ಮುದ್ನಾಳ್ ಹೇಳಿದರು.
ನಗರದ ವೀರನಿಕೇತನದಲ್ಲಿ ಮತಕ್ಷೇತ್ರದ ದೋರನಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು. ಮಾಜಿ ಸಿಎಂ ಯಡಿಯೂರಪ್ಪನವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಜನತೆ ಕೆಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಕಳೆದ 5 ವರ್ಷಗಳಲ್ಲಿ ಮತಕ್ಷೇತ್ರವನ್ನು ಅಭಿವೃದ್ಧಿಗೊಳಿಸದೆ ವೃಥಾ ಕಾಲಹರಣ ಮಾಡಿದ ಶಾಸಕರು ಮತದಾರರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ನೂತನವಾಗಿ ಅಸ್ತಿತ್ವಕ್ಕೆ ಬಂದ ಕೆಜೆಪಿಗೆ ರಾಜ್ಯದಲ್ಲಿ ಉತ್ತಮ ಭವಿಷ್ಯವಿದೆ. ಈ ಬಾರಿ ರಾಜ್ಯದಲ್ಲಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಕಾರ್ಯಕರ್ತರು ಚುನಾವಣೆಯಲ್ಲಿ ಸತತವಾಗಿ ಶ್ರಮಿಸಿ ಮತದಾರರಿಗೆ ಯಡಿಯೂರಪ್ಪನವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿಕೊಂಡಬೇಕೆಂದು ಸಲಹೆ ಮಾಡಿದರು.
ಇದೇ ವೇಳೆ ದೋರನಳ್ಳಿ ಗ್ರಾಮದ ಮುಖಂಡರಾದ ಚಿದಾನಂದ ಚಲುವಾದಿ, ಶಂಕ್ರಪ್ಪ ಮಲಕಲ, ಮರೆಪ್ಪ ಕೋಳೆ, ಬಸ್ಸಪ್ಪ ಹುರಸಗುಂಡಿಗಿ, ಮರಿಲಿಂಗಪ್ಪ ಕುರಕುಂದಿ, ರಾಯಪ್ಪ ಮುಕಲ, ಸಿದ್ದಪ್ಪ ರಸ್ತಾಪುರ ಸೇರಿದಂತೆ ಅನೇಕರು ಕೆಜೆಪಿ ಸೇರ್ಪಡೆಯಾದರು. ಕೆಜೆಪಿ ಮುಖಂಡರಾದ ಖಂಡಪ್ಪ ದಾಸನ್, ಅಯ್ಯಣ್ಣ ಹುಂಡೇಕಾರ್, ರಾಜು ಹೆಂದೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

