'ಶ್ರದ್ಧೆ, ಆಸಕ್ತಿಯಿದ್ದಲ್ಲಿ ವಿಷಯ ಗ್ರಹಣ'
ಹುಣಸಗಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಆಸಕ್ತಿಯಿಂದ ವಿಷಯ ಅಧ್ಯಯನ ಮಾಡಬೇಕು. ಹೆಚ್ಚಿನ ಅಂಕಗಳನ್ನು ಗಳಿಸಿ ಶಾಲೆಗೆ, ಪಾಲಕರಿಗೆ ಮತ್ತು ಶಿಕ್ಷಕರಿಗೆ ಗೌರವ ಹೆಚ್ಚಿಸಬೇಕೆಂದು ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷ ನಾಗಣ್ಣ ದಂಡಿನ್ ಹೇಳಿದರು.
ಸಮೀಪದ ಹುಣಸಗಿ ತಾಂಡಾದ ಶಾಲೆಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣವನ್ನು ಕಲಿಯಲು ಹಲವು ವರ್ಷಗಳ ಹಿಂದೆ ಕಠಿಣ ಪರಿಶ್ರಮ ಪಡುತ್ತಿದ್ದರು. ಆದರೆ ಈಗ ಸರ್ಕಾರ ವಿದ್ಯಾರ್ಥಿಗಳಿಗೋಸ್ಕರ ವಿವಿಧ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಬಿಸಿಯೂಟ ಸೇರಿದಂತೆ ನಾನಾ ಯೋಜನೆಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದು ಮಾತನಾಡಿದರು.
ಗುರು ರಾಠೋಡ ಮಾತನಾಡಿ, ವಿದ್ಯಾರ್ಥಿಗಳು ಶಾಲೆಯಲ್ಲಿ ಹೇಳಿದ ಪಾಠವನ್ನು ಮನೆಯಲ್ಲಿ ಬಂದು ಮನನ ಮಾಡಿಕೊಳ್ಳಬೇಕು. ಪದೇ ಪದೇ ಅಭ್ಯಾಸ ಮಾಡುವುದರಿಂದ ಯಾವುದೇ ಪ್ರಶ್ನೆಗೆ ಉತ್ತರಿಸುವ ದೈರ್ಯ ತಾನಾಗಿಯೇ ಬರುತ್ತದೆ ಎಂದು ಹೇಳಿದರು.
ಮುಖ್ಯ ಶಿಕ್ಷಕ ಮಲ್ಹಾರಿರಾವ ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ಗ್ರಾಪಂ ಸದಸ್ಯರಾದ ಬಸಣ್ಣ ದೊರಿ, ಬಸಣ್ಣ ದೇಸಾಯಿ, ಸೋಮಶೇಖರ ಸ್ಥಾವರಮಠ, ಮೌನೇಶ ಚಿಂಚೋಳಿ, ಮುರಿಗೆಣ್ಣ ದೇಸಾಯಿ, ಅಮೃತಬಾಯಿ ಜಹಾಗೀರದಾರ, ವಿಠ್ಠಲ್ ಪವಾರ, ಬಾಬು ರಾಠೋಡ, ಶಾಂತಾನಾಯ್ಕ ಚವ್ಹಾಣ ಇತರರು ಇದ್ದರು. ಶೋಭಾ ನಾಯ್ಕೋಡಿ ನಿರೂಪಿಸಿದರು. ಶರಣಮ್ಮ ಬಂಡೋಳಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

