ಗುಲ್ಬರ್ಗಾ

ಬಿಜೆಪಿಯಿಂದ ಟಿಕೆಟ್ ಭರವಸೆ: ಜೇವರ್ಗಿ

Published On :

ಸುರಪುರ: ಬಿಜೆಪಿ ಟಿಕೆಟ್ ಈಗಾಗಲೇ ಘೋಷಣೆಯಾಗಿದೆ ಎಂದು ತಾಲೂಕಿನಲ್ಲಿ ಹರಡಿರುವ ಸುದ್ದಿ ಊಹಾಪೋಹದಿಂದ ಕೂಡಿದ್ದು, ನಾನು ಬೆಂಗಳೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಟಿಕೆಟ್ ನೀಡುವಂತೆ ಮನವಿ ಸಲ್ಲಿಸಿದ್ದೇನೆ. ಕ್ಷೇತ್ರದಿಂದ ಟಿಕೆಟ್ ನೀಡುವ ಬಗ್ಗೆ ರಾಜ್ಯದ ವರಿಷ್ಠರು ಭರವಸೆ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ಮತ್ತು ಟಿಕೆಟ್ ಆಕಾಂಕ್ಷಿ ವೇಣುಗೋಪಾಲ ಜೇವರ್ಗಿ ತಿಳಿಸಿದರು.
ಬಿಜೆಪಿ ಟಿಕೆಟ್ ನನಗೆ ಸಿಕ್ಕಿದೆ ಎಂದು ಕೆಲವರು ಸುದ್ದಿ ಹರಡಿಸಿ ಕಾರ್ಯಕರ್ತರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಇನ್ನೂ ಪಕ್ಷದಿಂದ ಯಾವುದೇ ಅಭ್ಯರ್ಥಿಗಳ ಅಧಿಕೃತ ಆಯ್ಕೆಯಾಗಿಲ್ಲ. ಕೋರ್ ಕಮಿಟಿಯಲ್ಲಿ ಚರ್ಚಿಸಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡುವುದಾಗಿ ರಾಜ್ಯ ವರಿಷ್ಠರು ಭರವಸೆ ನೀಡಿದ್ದಾರೆಂದು ಜೇವರ್ಗಿ ಪತ್ರಿಕೆಗೆ ತಿಳಿಸಿದ್ದಾರೆ.
ಸುಮಾರು 25 ವರ್ಷಗಳಿಂದ ಪಕ್ಷದಲ್ಲಿದ್ದು, ಪಕ್ಷದ ಸಂಘಟನೆಗೆ ಸಾಕಷ್ಟು ಪ್ರಯತ್ನಿಸಿದ್ದೇನೆ.
 ಪಕ್ಷದ ಮೂಲ ಕಾರ್ಯಕರ್ತರನ್ನು ಬಿಟ್ಟು ಪಕ್ಷ ಸೇರುವವರಿಗೆ ಟಿಕೆಟ್ ನೀಡಿದರೆ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದಂತಾಗುತ್ತದೆ ಎಂದು ವರಿಷ್ಠರಿಗೆ ನಾನು ಮನವರಿಕೆ ಮಾಡಿಕೊಟ್ಟಾಗ ನನಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದರು ಎಂದು ಜೇವರ್ಗಿ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.